ತುಮಕೂರು: ’ಸಿದ್ದರಾಮಯ್ಯ ಅವರಂತಹ ಜನನಾಯಕರು ಕಾಂಗ್ರೆಸ್ ಪಕ್ಷಕ್ಕೆ ಅವಶ್ಯ. ಅವರನ್ನು ಕಡೆಗಣಿಸಿದರೆ ಕಾಂಗ್ರೆಸ್ ಪಕ್ಷ ‘ಸೊನ್ನೆ’ ಆಗುತ್ತದೆ’ ಎಂದು ಮಾಜಿ ಶಾಸಕ ಕೆ.ಎನ್.ರಾಜಣ್ಣ ಎಚ್ಚರಿಕೆ ನೀಡಿದರು.
ಮಾಧ್ಯಮದವರೊಂದಿಗೆ ಮಾತನಾಡಿ, ‘ಕೆಲವರು ಲಾಬಿ ನಡೆಸಿ ಲೀಡರ್ ಆಗಲು ಹೊರಟಿದ್ದಾರೆ. ಅಂಥವರಿಗೆ ಚುನಾವಣೆಗಳಲ್ಲಿ ಹತ್ತು ಮತ ಹಾಕಿಸುವ ಯೋಗ್ಯತೆಯೂ ಇರುವುದಿಲ್ಲ’ ಎಂದರು.
‘ಉದಾಹರಣೆಗೆ ನಮ್ಮ ಜಿಲ್ಲೆಯವನು ವಿರೋಧ ಪಕ್ಷದ ನಾಯಕನಾಗಲು ಹೊರಟಿದ್ದಾನೆ. ಅವನೇನಾದರೂ ವಿರೋಧ ಪಕ್ಷದ ನಾಯಕನಾದರೆ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಸಮಾಧಿಯಾಗುತ್ತದೆ’ ಎಂದು ಡಾ.ಜಿ.ಪರಮೇಶ್ವರ ವಿರುದ್ಧ ಪರೋಕ್ಷವಾಗಿ ಏಕ ವಚನದಲ್ಲಿಯೇ ವಾಗ್ದಾಳಿ ನಡೆಸಿದರು.
’ಅನರ್ಹ ಶಾಸಕರ ಮನನೊಯಿಸಿದರೆ ಬಿಜೆಪಿಗೆ ಶಾಪ ತಟ್ಟಲಿದೆ. ಬಿಜೆಪಿ ಸರ್ಕಾರ ಬಂದಿರೋದೆ ಅವರಿಂದ. ಅವರಿಗೆ ನೋವು ಮಾಡುವ ಪ್ರಯತ್ನ ಬಿಜೆಪಿಯವರು ಮಾಡಬಾರದು. ಗೌರವಯುತವಾಗಿ ನಡೆಸಿಕೊಳ್ಳಬೇಕು. ಅವರಿಗೆ ನೀಡಿದ ಆಶ್ವಾಸನೆಗಳನ್ನು ಉಳಿಸಿಕೊಳ್ಳಬೇಕು’ ಎಂದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…