ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಮಧು ಬಂಗಾರಪ್ಪ ; ಕಾಂಗ್ರೆಸ್ ಸೇರುವುದು ಬಹುತೇಕ ಖಚಿತ -Vishwanews24
ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಮಧು ಬಂಗಾರಪ್ಪ ; ಕಾಂಗ್ರೆಸ್ ಸೇರುವುದು ಬಹುತೇಕ ಖಚಿತ -Vishwanews24
ಬೆಂಗಳೂರು: ಕಾಂಗ್ರೆಸ್ ಪಕ್ಷ ಸೇರಲು ನಿರ್ಧರಿಸಿರುವ ಜೆಡಿಎಸ್ ಮುಖಂಡ ಮಧು ಬಂಗಾರಪ್ಪ ಅವರು ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಬೆಂಗಳೂರಿನ ಸಿದ್ದರಾಮಯ್ಯ ನಿವಾಸದಲ್ಲಿ ಭೇಟಿ ಮಾಡಿದ ಮಧೂ ಬಂಗಾರಪ್ಪ, ಕೆಲ ಕಾಲ ಸಮಾಲೋಚನೆ ನಡೆಸಿದರು. ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುವ ಬಗ್ಗೆ ಮಾತುಕತೆ ನಡೆಸಲಾಗಿದೆ ಎನ್ನಲಾಗಿದೆ.
ಮಧು ಬಂಗಾರಪ್ಪ ಅವರು ಕಾಂಗ್ರೆಸ್ ಸೇರುವುದು ಬಹುತೇಕ ಖಚಿತವಾಗಿದೆ. ಆದರೆ ಸೇರ್ಪಡೆಯಾಗುವ ದಿನಾಂಕ ಇದುವರೆಗೆ ನಿಗದಿಯಾಗಿಲ್ಲ.
ಎಚ್ ಡಿಕೆ ತಿರುಗೇಟು: ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಎಚ್ ಡಿ ಕುಮಾರಸ್ವಾಮಿ, ಜೆಡಿಎಸ್ ಬಾಗಿಲು ತೆರೆದಿದೆ. ಹೋಗುವವರು ಹೋಗಬಹುದು. ದೇವೇಗೌಡರು ಯಾರನ್ನು ಬೆಳೆಸಿದ್ದರೋ ಅವರೇ ಬೆನ್ನಿಗೆ ಚೂರಿ ಹಾಕುತ್ತಿದ್ದಾರೆ. ಮಧು ಬಂಗಾರಪ್ಪ ಪಕ್ಷ ತೊರೆಯುವುದು ಹಳೇಯ ವಿಚಾರ ಎಂದರು.
