Featured

ಸಿದ್ದರಾಮಯ್ಯ ಅವರಿಗೆ ಭದ್ರತೆ ಹೆಚ್ಚಿಸಿದ್ದೇವೆ : ಮುಖ್ಯಮಂತ್ರಿ ಬೊಮ್ಮಾಯಿ – Vishwanews24

ಸಿದ್ದರಾಮಯ್ಯ ಅವರಿಗೆ ಭದ್ರತೆ ಹೆಚ್ಚಿಸಿದ್ದೇವೆ : ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಭದ್ರತೆ ಹೆಚ್ಚಿಸಿದ್ದೇವೆ. ಈ ಬಗ್ಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಧರ್ಮ ಪಶ್ಚಾತ್ತಾಪ ವಿಚಾರದಲ್ಲಿ ಸಿದ್ದು ಯೂಟರ್ನ್ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿಎಂ, ಸ್ವಾಮೀಜಿ ಮತ್ತು ಸಿದ್ದರಾಮಯ್ಯ ನಡುವೆ ನಡೆದಿರುವ ಸಂಭಾಷಣೆ ಇದ್ದಾಗಿದ್ದು, ಆ ಬಗ್ಗೆ ನಾನು ಮಾತನಾಡಲ್ಲ. ಸಿದ್ದರಾಮಯ್ಯ ನಿನ್ನೆ ಒಂದು. ಇಂದು ಒಂದು ಮಾತನಾಡಿದ್ದಾರೆ. ಸತ್ಯ ಜಗತ್ತಿಗೆ ಗೊತ್ತು ಎಂದು ವಾಗ್ದಾಳಿ ನಡೆಸಿದರು.

ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ 107ನೇ ಜನ್ಮದಿನಾಚರಣೆ ಸಂಬಂಧ ವಿಧಾನಸೌಧದ ದೇವರಾಜ ಅರಸು ಪ್ರತಿಮೆ ಬಳಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ಬಳಿಕ ಮಾತನಾಡಿದ ಅವರು, ಇಂದು ಕರ್ನಾಟಕ ಕಂಡಂತಹ ಧೀಮಂತ ನಾಯಕ, ಹಿಂದುಳಿದವರ ನಾಯಕ ದೇವರಾಜ ಅರಸ್ ಅವರು ತಮ್ಮದೇ ಆದಂತಹ ಸೇವೆಯನ್ನ ಮಾಡಿ ಜನಮನ ಗೆದ್ದಿದ್ದಾರೆ. ಅವರಿಗೆ ಬಡವರ ಬಗ್ಗೆ ಕಳಕಳಿ ಇತ್ತು, ಹಿಂದುಳಿದವರ ನಾಯಕ ಅವರಾಗಿದ್ದರು. ಹಿಂದುಳಿದ ವರ್ಗದವರ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸೇವೆ ಮಾಡಿದವರು. ಭೂ ಸುಧಾರಣೆ ಬಗ್ಗೆ ಅತೀ ಮೊದಲು ಚಿಂತನೆ ಮಾಡಿ ಕಾರ್ಯರೂಪಕ್ಕೆ ತಂದ ಶ್ರೇಯಸ್ಸು ಅವರಗಿದೆ ಎಂದರು.

ಈ ವೇಳೆ ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, ಸಚಿವ ಅಶ್ವತ್ಥನಾರಾಯಣ್ ಸೇರಿದಂತೆ ಕೆಲ ಶಾಸಕರು, ಪರಿಷತ್ ಸದಸ್ಯರು ಉಪಸ್ಥಿತರಾದರು.

ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ ..

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

27 minutes ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

1 hour ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

1 hour ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

1 hour ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

1 hour ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

21 hours ago