ಹಾಸನ : ‘ಮುಂದಿನ ದಿನಗಳಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶುಭ ಸೂಚನೆ ಸಿಗಲಿದೆ ಎಂದು ಕೋಡಿ ಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ.
ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಗಂಗೆಮಡುವಿನಲ್ಲಿ ಮಾತನಾಡಿದ ಅವರು, ಬರುವ ದಿನಗಳಲ್ಲಿ ಸಿದ್ದರಾಮಯ್ಯಗೆ ಶುಭ ಸೂಚನೆ ಇದೆ. ಹಿಂದೆ ಬಾದಾಮಿಗೆ ಬನ್ನಿ ಎಂದು ನಾನೇ ಕರೆದಿದ್ದೆ. ಆದರೆ, ಅವರು ಇಲ್ಲೇ ಗೆಲ್ಲುವೆ ಎಂದು ಹೇಳಿದರು. ಕೊನೆಗೆ ಬಂದರು. ಮತ್ತೆ ಕೆಲವೇ ತಿಂಗಳಲ್ಲಿ ಚುನಾವಣೆ ಬರಲಿದೆ. ಸಿದ್ದರಾಮಯ್ಯ ನೀವು ಈಗಾಗಲೇ ರಾಜ್ಯದ ಗದ್ದುಗೆ ಹಿಡಿದಿದ್ದೀರಿ. ಇನ್ಮುಂದೆ ನೀವು ದೆಹಲಿಯ ಗದ್ದುಗೆ ಹಿಡಿಯಿರಿ. ದೆಹಲಿ ಕಡೆ ನೋಡಿ ಎಂದು ಸೂಚಿಸಿದ್ದೇನೆ ಎಂದು ಕೋಡಿ ಶ್ರೀ ಸೂಚನೆ ನೀಡಿದ್ದಾರೆ.
ಹಾಲುಮತ ಸಮಾಜದವರು ಇಡೀ ಭಾರತದಾದ್ಯಂತ ಎಲ್ಲ ರಾಜ್ಯಗಳಲ್ಲಿ ನೆಲೆಸಿದ್ದಾರೆ. ನಾನು ಹಿಂದೆಯೇ ಹೇಳಿದ್ದೆ ಕಂಬಳಿ ಹಾಸೀತು ಹಂಬಳಿ ಹಳಸೀತು, ಸಿದ್ದು ಗದ್ದುಗೆ ಹಾಸೀತು ಎಂದು. ಆಗ ಸಿದ್ದರಾಮಯ್ಯ ರಾಜ್ಯದ ಸಿಎಂ ಆಗಿದ್ದರು ನನ್ನ ಮಾತು ಸುಳ್ಳಾಗಲಿಲ್ಲ. ಈಗ ಮತ್ತೆ ಸಿದ್ದರಾಮಯ್ಯಗೆ ಶುಭಸೂಚನೆ ಇದೆ ಎಂದು ತಿಳಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…