Featured

ಸಿದ್ದರಾಮಯ್ಯ ಅವರು ಚಡ್ಡಿಯನ್ನು ಸುಡುವುದಕ್ಕೂ ಮುನ್ನ ತಮ್ಮ ವಿಕೃತ ಮನಸ್ಸನ್ನು ಸುಡಬೇಕಿದೆ : ಸುನಿಲ್ ಕುಮಾರ್  – Vshwanews24

ಸಿದ್ದರಾಮಯ್ಯ ಅವರು ಚಡ್ಡಿಯನ್ನು ಸುಡುವುದಕ್ಕೂ ಮುನ್ನ ತಮ್ಮ ವಿಕೃತ ಮನಸ್ಸನ್ನು ಸುಡಬೇಕಿದೆ : ಸುನಿಲ್ ಕುಮಾರ್  – Vshwanews24

ಹಾಸನ: ‘ಸಿದ್ದರಾಮಯ್ಯ ಅವರು ಚಡ್ಡಿಯನ್ನು ಸುಡುವುದಕ್ಕೂ ಮುನ್ನ ತಮ್ಮ ವಿಕೃತ ಮನಸ್ಸನ್ನು ಸುಡಬೇಕಿದೆ’ ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದರು.

ನಗರದಲ್ಲಿ‌ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾನು ಸಿದ್ದರಾಮಯ್ಯ ಅವರಿಗೆ ಬುದ್ಧಿ ಹೇಳುವಷ್ಟು ದೊಡ್ಡವನಲ್ಲ. ಸಿದ್ದರಾಮಯ್ಯ ಅವರು ಜಾತಿ -ಜಾತಿಗಳ ನಡುವೆ ವಿಷಬೀಜ ಬಿತ್ತುತ್ತಿದ್ದಾರೆ. ಟಿಪ್ಪು ಸುಲ್ತಾನ್‌ನನ್ನು ವೈಭವೀಕರಿಸಿ ಹಿಂದೂಗಳ ಭಾವನೆಗಳನ್ನು ಸುಟ್ಟು ಹಾಕುತ್ತಿದ್ದಾರೆ’ ಎಂದು ದೂರಿದರು.

‘ಆರ್‌ಎಸ್‌ಎಸ್ ಸಂಘಟನೆ ಬಗ್ಗೆ ಕೀಳುಮಟ್ಟದ ಹೇಳಿಕೆಗಳನ್ನು ನೀಡುವುದನ್ನು ಅವರು ನಿಲ್ಲಿಸಬೇಕು ಅವರ ಮನಸ್ಥಿತಿಯನ್ನು ಮೊದಲು ಸರಿಮಾಡಿಕೊಳ್ಳಲಿ’ ಎಂದು ಸಲಹೆ ನೀಡಿದರು.

‘ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರವಾಗಿ ಕಾಂಗ್ರೆಸ್‌ನವರು ಅನಗತ್ಯವಾಗಿ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ’ ಎಂದು ಆರೋಪಿಸಿದ ಸುನಿಲ್ ಕುಮಾರ್ ಅವರು, ‘ಕೆಲವು ಸತ್ಯ ಸಂಗತಿಗಳು ಅವರಿಗೆ ಕಹಿಯಾಗಿ ಕಾಣುತ್ತವೆ. ಹಾಗೆಂದು ನಾವು ನೈಜ ಇತಿಹಾಸವನ್ನು ಮುಚ್ಚಿಡಲು ಆಗುವುದಿಲ್ಲ. ಇತಿಹಾಸದಲ್ಲಿ ಮುಚ್ಚಿಟ್ಟಿದ್ದನ್ನು ತಿಳಿಸುವುದಕ್ಕೆ ಹೊರಟಿದ್ದೇವೆ ಅಷ್ಟೇ. ಆದರೆ ಕಾಂಗ್ರೆಸ್‌ನವರು ವಿವಾದಗಳನ್ನು ಹುಟ್ಟುಹಾಕಿ ರಾಜಕೀಯ ಮಾಡಲು ಹೊರಟಿದ್ದಾರೆ’ ಎಂದು ದೂರಿದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago