Featured

ಸಿದ್ದರಾಮಯ್ಯ ಅವರು ಬ್ಲ್ಯಾಕ್ ಮೇಲ್ ತಂತ್ರಕ್ಕೆ ಮುಂದಾಗಿರುವುದು ಆಶ್ಚರ್ಯ ಮತ್ತು ಹಾಸ್ಯಾಸ್ಪದ : ಶಾಸಕ ಸುನಿಲ್ ಕುಮಾರ್ – vishwanews24

ಕಾರ್ಕಳ ಪರಶುರಾಮ ಥೀಮ್ ಪಾರ್ಕ್  ಗೆ ಹಣ ಬಿಡುಗಡೆ ಮಾಡದೇ ಅವ್ಯವಹಾರ ಹೇಗೆ ಆಗುತ್ತೆ : ಶಾಸಕ ಸುನಿಲ್ ಕುಮಾರ್

ಚಿಕ್ಕಮಗಳೂರು: ಸದನದಲ್ಲಿ ಸಿಎಂ ಸಿದ್ದರಾಮಯ್ಯ  ಅವರು ಕಾರ್ಕಳ ಪರಶುರಾಮ ಥೀಮ್ ಪಾರ್ಕ್  ಕಾಮಗಾರಿಯಲ್ಲಿ 11 ಕೋಟಿ ರೂ. ಅವ್ಯವಹಾರ ನಡೆದಿದೆ ಎಂದಿದ್ದಾರೆ. ಸರ್ಕಾರ ಇನ್ನೂ 11 ಕೋಟಿ ರೂ. ಬಿಡುಗಡೆಯೇ ಮಾಡಿಲ್ಲ. ಹಣ ಬಿಡುಗಡೆ ಮಾಡದೇ ಅವ್ಯವಹಾರ ಹೇಗೆ ಆಗುತ್ತೆ ಎಂದು ಶಾಸಕ ಸುನಿಲ್ ಕುಮಾರ್  ಪ್ರಶ್ನಿಸಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಈ ವೇಳೆ ಹಗರಣ ಪ್ರಕರಣ ಮುಚ್ಚಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬ್ಲ್ಯಾಕ್ ಮೇಲ್ ತಂತ್ರಕ್ಕೆ ಮುಂದಾಗಿದ್ದಾರೆ. ನಾನು ಹಗರಣ ಮಾಡಿದ್ದೇನೆ. ನಿಮ್ಮ ಹಗರಣ ತೆಗಿತೀನಿ ಎನ್ನುವ ವರಸೆಯಲ್ಲಿ ಅವರು ಮಾತನಾಡುತ್ತಿದ್ದು, ಬ್ಲ್ಯಾಕ್ ಮೇಲ್ ತಂತ್ರಕ್ಕೆ ಮುಂದಾಗಿರುವುದು ಆಶ್ಚರ್ಯ ಮತ್ತು ಹಾಸ್ಯಾಸ್ಪದವಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.

ವಾಲ್ಮೀಕಿ, ಮೂಡಾ ಹಗರಣ ಬರುವ ತನಕ ಬಿಜೆಪಿ ಹಗರಣ ನಿಮಗೆ ಗೊತ್ತಿರಲಿಲ್ವಾ? ನಿಮ್ಮದೇ ಸರ್ಕಾರ ಇರುವಾಗ ಇಲ್ಲಿಯವರೆಗೂ ಯಾಕೆ ತನಿಖೆ ಮಾಡಲಿಲ್ಲ? ನಿಮ್ಮ ಕಾಲಬುಡಕ್ಕೆ ಬಂದಾಗ ಬಿಜೆಪಿ ಬಗ್ಗೆ ಹೇಳುತ್ತಿದ್ದೀರಿ. ಸಿಎಂ ಸದನದ ಒಳಗೆ ಎಷ್ಟೊಂದು ಸುಳ್ಳು ಹೇಳಿದ್ದಾರೆ. ಸದನದ ಒಳಗೆ ಇಷ್ಟು ಸುಳ್ಳು ಹೇಳುವ ಮುಖ್ಯಮಂತ್ರಿಯನ್ನು ಎಂದು ಕಂಡಿಲ್ಲ. ಅವ್ಯವಹಾರ ಆಗಿದ್ದರೆ ಯಾವ ತನಿಖೆಯನ್ನು ಬೇಕಾದರೂ ಮಾಡಲಿ. ಸಿಬಿಐ, ಇಂಟರ್ ಪೋಲ್, ಸಿಐಡಿ ಯಾವುದೇ ತನಿಖೆ ಬೇಕಾದರೂ ಮಾಡಿ ಎಂದು ಅವರು ಸವಾಲು ಹಾಕಿದ್ದಾರೆ.

Vishwa News 24

Recent Posts

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ – vishwanews24

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1.37…

20 hours ago

ಬಾರ್, ಪಬ್ ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  – vishwanews24

ಬಾರ್, ಪಬ್‍ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  ಬೆಂಗಳೂರು : ಬಾರ್,…

20 hours ago

ಕಾಂಗ್ರೆಸ್ ಬಡವರ ಪಕ್ಷ ; ಶಾಲು, ಹೂವು ಹಾಕುವ ಬದಲು ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್ ಸಲಹೆ – vishwanews24

ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…

20 hours ago

ಹಾವೇರಿ : ಸ್ವಯಂ ಉದ್ಯೋಗದ ಹೆಸರಲ್ಲಿ ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ – vishwanews24

ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…

20 hours ago

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ – vishwanews24

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…

21 hours ago

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು – vishwanews24

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…

21 hours ago