ಸಿದ್ದರಾಮಯ್ಯ ಅವರ ಬಣ್ಣ ಬಯಲು , ಅವರು ಬಿಜೆಪಿಯನ್ನು ಗೆಲ್ಲಿಸಲು ಹೊರಟಿದ್ದಾರೆ : ಎಚ್.ಡಿ. ಕುಮಾರಸ್ವಾಮಿ – Vishwnaews24
ರಾಜ್ಯ ರಾಜಕಾರಣದಲ್ಲಿ ಶನಿವಾರದಿಂದ ಹೊಸ ಶಕೆ ಆರಂಭ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಶನಿವಾರದಿಂದ ಹೊಸ ಶಕೆ ಆರಂಭವಾಗಲಿದೆ. ಇನ್ನು ಯಾವುದೇ ಹೊಂದಾಣಿಕೆಗೂ ಸಿದ್ಧವಿಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಅವರು, ಎರಡನೇ ಪ್ರಾಶಸ್ತ್ಯದ ಮತಗಳನ್ನೂ ಜೆಡಿಎಸ್ ಅಭ್ಯರ್ಥಿಗೆ ನೀಡದಮತೆ ಕಾಂಗ್ರೆಸ್ ಹೈಕಮಾಂಡ್ ಸೂಚಿಸಿದೆ ಎಂದು ಆ ಪಕ್ಷದ ನಾಯಕರು ಹೇಳಿದ್ದಾರೆ. ಜಾತ್ಯತೀತ ತತ್ವದ ಬಗ್ಗೆ ಮಾತನಾಡುವವರ ಉಡಾಫೆ ರಾಜಕಾರಣಕ್ಕೆ ಸರಿಯಾದ ಉತ್ತರ ನೀಡಲಾಗುವುದು ಎಂದರು.
ನಮ್ಮ ಪಕ್ಷದ 30-31 ಶಾಸಕರು ನಮ್ಮ ಜತೆಯೇ ಇದ್ದಾರೆ. ಕೋಲಾರದ ಶ್ರೀನಿವಾಸ ಗೌಡ ಕಾಂಗ್ರೆಸ್ ಅಭ್ಯರ್ಥಿಗೆ ಮತ ಚಲಾಯಿಸುವುದಾಗಿ ಹೇಳಿದ್ದಾರೆ. ದಿ ಗ್ರೇಟ್ ರಮೇಶ್ ಕುಮಾರ್ ಮತ್ತು ಸಿದ್ದರಾಮಯ್ಯ ಸೇರಿಕೊಂಡು ಶ್ರೀನಿವಾಸ ಗೌಡರ ಆತ್ಮಸಾಕ್ಷಿಯ ಮತ ಪಡೆಯುವಲ್ಲಿ ಸಫಲರಾಗಿದ್ದಾರೆ . ಅದಕ್ಕಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಣ್ಣ ಬಯಲಾಗಿದೆ. ಅವರು ಬಿಜೆಪಿಯನ್ನು ಗೆಲ್ಲಿಸಲು ಹೊರಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ರಾಜ್ಯಸಭಾ ಚುನಾವಣೆ ಹಿನ್ನೆಲೆ ಮಾತನಾಡಿದ ಕುಮಾರಸ್ವಾಮಿ, ಸಿಟಿ ರವಿ ಕಾಂಗ್ರೆಸ್ ಕಚೇರಿಗೆ ಧನ್ಯವಾದ ತಿಳಿಸಿಲು ತೆರಳಿದ್ದರು. ಬಿಜೆಪಿ ಬಿ ಟೀಂ ಯಾವುದು ಎಂಬುದು ಈಗ ಗೊತ್ತಾಗಿದೆ. ಈಶ್ವರಪ್ಪ ಅವರು ಸಿದ್ದರಾಮಯ್ಯ ನಮ್ಮನ್ನು ಗೆಲ್ಲಿಸುತ್ತಾರೆ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಬಣ್ಣ ಬಯಲಾಗಿದೆ ಎಂದು ಸಿಟ್ಟು ಹೊರಹಾಕಿದ್ದಾರೆ.
ರಾಜ್ಯಸಭೆ ಕದನ : ಎಚ್.ಡಿ. ರೇವಣ್ಣ ಮತ ಅಸಿಂಧುಗೊಳಿಸುವಂತೆ ಬಿಜೆಪಿ ಆಗ್ರಹ – Vishwanews24
