ಸಿದ್ದರಾಮಯ್ಯ ಅವರ 75ನೇ ಜನ್ಮದಿನ ಅಮೃತ ಮಹೋತ್ಸವವು ಕಾಂಗ್ರೆಸ್ ಗೆಲುವಿಗೆ ಮೆಟ್ಟಿಲಾಗಲಿ: ಡಿಕೆಶಿ – Vishwanews24
ಸಿದ್ದರಾಮಯ್ಯ ಅವರ 75ನೇ ಜನ್ಮದಿನ ಅಮೃತ ಮಹೋತ್ಸವವು ಕಾಂಗ್ರೆಸ್ ಗೆಲುವಿಗೆ ಮೆಟ್ಟಿಲಾಗಲಿ: ಡಿಕೆಶಿ
ಬೆಂಗಳೂರು: ಸಿದ್ದರಾಮಯ್ಯ ಅವರ 75ನೇ ಜನ್ಮದಿನ ಅಮೃತ ಮಹೋತ್ಸವವು ಕಾಂಗ್ರೆಸ್ ಗೆಲುವಿಗೆ ಅನುಕೂಲವಾಗುವಂತಹ ಕಾರ್ಯಕ್ರಮವಾಗಬೇಕು. ನಮ್ಮೆಲ್ಲರ ಗುರಿ 2023ಕ್ಕೆ ಕಾಂಗ್ರೆಸ್ ಪಕ್ಷವನ್ನು ವಿಧಾನಸೌಧದಲ್ಲಿ ಅಧಿಕಾರಕ್ಕೆ ತರುವುದಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿದ್ದರಾಮಯ್ಯ ಅವರ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಸಿದ್ದರಾಮೋತ್ಸವ ಎಂದು ಮಾಡುತ್ತಿರುವುದು ಮಾಧ್ಯಮಗಳ ಸೃಷ್ಟಿ. ಸಮಿತಿಯು ಎಲ್ಲೂ ಸಿದ್ದರಾಮೋತ್ಸವ ಎಂದು ಹೇಳಿಲ್ಲ. ಕಾರ್ಯಕ್ರಮವನ್ನು ಪಕ್ಷದ ನಾಯಕರೇ ಮಾಡುತ್ತಿದ್ದು, ಖುದ್ದು ರಾಹುಲ್ಗಾಂಧಿ ಅವರೂ ಆಗಮಿಸುತ್ತಿದ್ದಾರೆ.
ಹೀಗಾಗಿ ಪಕ್ಷದ ಗೆಲುವಿಗೆ ಪೂರಕವಾಗಿಯೇ ಕಾರ್ಯಕ್ರಮ ಇರಲಿದೆ’ ಎಂದರು. ಕಾಂಗ್ರೆಸ್ ಶಾಸಕಿ ಲಕ್ಷ್ಮೇ ಹೆಬ್ಬಾಳ್ಕರ್ ಅವರು ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ‘ನನಗೆ ಆ ವಿಚಾರದ ಬಗ್ಗೆ ಗೊತ್ತಿಲ್ಲ. ಅವರು ವೈಯಕ್ತಿಕ ವಿಚಾರವಾಗಿ ಭೇಟಿ ನೀಡಿದ್ದಾರೋ ಅಥವಾ ರಾಜಕೀಯ ವಿಚಾರವಾಗಿ ಭೇಟಿ ಮಾಡಿದ್ದಾರೋ ನನಗೆ ಮಾಹಿತಿ ಇಲ್ಲ. ಶಾಸಕರು ಬೇರೆ ಪಕ್ಷಗಳ ನಾಯಕರನ್ನು ಭೇಟಿ ಮಾಡುವುದು ಸಹಜ. ಹಿರಿಯ ನಾಯಕರಿಗೆ ಗೌರವ ಸಲ್ಲಿಸಲು ಹೋಗಿರಬಹುದು’ ಎಂದು ಹೇಳಿದರು.
ಯಾವುದೇ ಮಂತ್ರಿಗಳು ತಮ್ಮ ಜವಾಬ್ದಾರಿಗೆ ಅನುಗುಣವಾಗಿ ಕೆಲಸ ಮಾಡುತ್ತಿಲ್ಲ’ ಎಂದು ಕಿಡಿಕಾರಿದರು. ‘ಕೊಡಗು, ದಕ್ಷಿಣ ಕನ್ನಡ ಭಾಗದ ಸ್ಥಿತಿ ಶೋಚನೀಯವಾಗಿದೆ. ಯಾರೊಬ್ಬರಿಗೂ ಈ ಸರ್ಕಾರ ನೆರವು ನೀಡಿಲ್ಲ. ಅಧಿಕಾರಿಗಳು ಕೂಡ ಯಾವುದೇ ಕೆಲಸ ಮಾಡಿಲ್ಲ. ನೆಪ ಮಾತ್ರಕ್ಕೆ ಬೆರಳೆಣಿಕೆ ಮನೆಗಳಿಗೆ ಭೇಟಿ ನೀಡುತ್ತಿದ್ದಾರೆ. ಜನರಿಗೆ ಸಹಾಯ ಮಾಡುವ ಯಾವುದೇ ಉದ್ದೇಶದಿಂದ ಈ ಸರ್ಕಾರ ಕೆಲಸ ಮಾಡುತ್ತಿಲ್ಲ. ಪ್ರತಿಪಕ್ಷಗಳು ತರಾಟೆಗೆ ತೆಗೆದುಕೊಂಡ ಬಳಿಕ ಫೋಟೋಗಳಿಗೆ ಪೋಸು ನೀಡಿ ಪ್ರಚಾರ ಪಡೆಯಲಷ್ಟೇ ಹೋಗುತ್ತಿದ್ದಾರೆ. ಇವರಿಂದ ಜನರ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ’ ಎಂದು ಹೇಳಿದರು.
