Featured

ಸಿದ್ದರಾಮಯ್ಯ ಅವರ 75ನೇ ಜನ್ಮದಿನ ಅಮೃತ ಮಹೋತ್ಸವವು ಕಾಂಗ್ರೆಸ್‌ ಗೆಲುವಿಗೆ ಮೆಟ್ಟಿಲಾಗಲಿ: ಡಿಕೆಶಿ – Vishwanews24

ಸಿದ್ದರಾಮಯ್ಯ ಅವರ 75ನೇ ಜನ್ಮದಿನ ಅಮೃತ ಮಹೋತ್ಸವವು ಕಾಂಗ್ರೆಸ್‌ ಗೆಲುವಿಗೆ ಮೆಟ್ಟಿಲಾಗಲಿ: ಡಿಕೆಶಿ

ಬೆಂಗಳೂರು: ಸಿದ್ದರಾಮಯ್ಯ ಅವರ 75ನೇ ಜನ್ಮದಿನ ಅಮೃತ ಮಹೋತ್ಸವವು ಕಾಂಗ್ರೆಸ್‌ ಗೆಲುವಿಗೆ ಅನುಕೂಲವಾಗುವಂತಹ ಕಾರ್ಯಕ್ರಮವಾಗಬೇಕು. ನಮ್ಮೆಲ್ಲರ ಗುರಿ 2023ಕ್ಕೆ ಕಾಂಗ್ರೆಸ್‌ ಪಕ್ಷವನ್ನು ವಿಧಾನಸೌಧದಲ್ಲಿ ಅಧಿಕಾರಕ್ಕೆ ತರುವುದಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅಭಿಪ್ರಾಯಪಟ್ಟಿದ್ದಾರೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿದ್ದರಾಮಯ್ಯ ಅವರ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಸಿದ್ದರಾಮೋತ್ಸವ ಎಂದು ಮಾಡುತ್ತಿರುವುದು ಮಾಧ್ಯಮಗಳ ಸೃಷ್ಟಿ. ಸಮಿತಿಯು ಎಲ್ಲೂ ಸಿದ್ದರಾಮೋತ್ಸವ ಎಂದು ಹೇಳಿಲ್ಲ. ಕಾರ್ಯಕ್ರಮವನ್ನು ಪಕ್ಷದ ನಾಯಕರೇ ಮಾಡುತ್ತಿದ್ದು, ಖುದ್ದು ರಾಹುಲ್‌ಗಾಂಧಿ ಅವರೂ ಆಗಮಿಸುತ್ತಿದ್ದಾರೆ.

ಹೀಗಾಗಿ ಪಕ್ಷದ ಗೆಲುವಿಗೆ ಪೂರಕವಾಗಿಯೇ ಕಾರ್ಯಕ್ರಮ ಇರಲಿದೆ’ ಎಂದರು. ಕಾಂಗ್ರೆಸ್‌ ಶಾಸಕಿ ಲಕ್ಷ್ಮೇ ಹೆಬ್ಬಾಳ್ಕರ್‌ ಅವರು ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ‘ನನಗೆ ಆ ವಿಚಾರದ ಬಗ್ಗೆ ಗೊತ್ತಿಲ್ಲ. ಅವರು ವೈಯಕ್ತಿಕ ವಿಚಾರವಾಗಿ ಭೇಟಿ ನೀಡಿದ್ದಾರೋ ಅಥವಾ ರಾಜಕೀಯ ವಿಚಾರವಾಗಿ ಭೇಟಿ ಮಾಡಿದ್ದಾರೋ ನನಗೆ ಮಾಹಿತಿ ಇಲ್ಲ. ಶಾಸಕರು ಬೇರೆ ಪಕ್ಷಗಳ ನಾಯಕರನ್ನು ಭೇಟಿ ಮಾಡುವುದು ಸಹಜ. ಹಿರಿಯ ನಾಯಕರಿಗೆ ಗೌರವ ಸಲ್ಲಿಸಲು ಹೋಗಿರಬಹುದು’ ಎಂದು ಹೇಳಿದರು.

ಯಾವುದೇ ಮಂತ್ರಿಗಳು ತಮ್ಮ ಜವಾಬ್ದಾರಿಗೆ ಅನುಗುಣವಾಗಿ ಕೆಲಸ ಮಾಡುತ್ತಿಲ್ಲ’ ಎಂದು ಕಿಡಿಕಾರಿದರು. ‘ಕೊಡಗು, ದಕ್ಷಿಣ ಕನ್ನಡ ಭಾಗದ ಸ್ಥಿತಿ ಶೋಚನೀಯವಾಗಿದೆ. ಯಾರೊಬ್ಬರಿಗೂ ಈ ಸರ್ಕಾರ ನೆರವು ನೀಡಿಲ್ಲ. ಅಧಿಕಾರಿಗಳು ಕೂಡ ಯಾವುದೇ ಕೆಲಸ ಮಾಡಿಲ್ಲ. ನೆಪ ಮಾತ್ರಕ್ಕೆ ಬೆರಳೆಣಿಕೆ ಮನೆಗಳಿಗೆ ಭೇಟಿ ನೀಡುತ್ತಿದ್ದಾರೆ. ಜನರಿಗೆ ಸಹಾಯ ಮಾಡುವ ಯಾವುದೇ ಉದ್ದೇಶದಿಂದ ಈ ಸರ್ಕಾರ ಕೆಲಸ ಮಾಡುತ್ತಿಲ್ಲ. ಪ್ರತಿಪಕ್ಷಗಳು ತರಾಟೆಗೆ ತೆಗೆದುಕೊಂಡ ಬಳಿಕ ಫೋಟೋಗಳಿಗೆ ಪೋಸು ನೀಡಿ ಪ್ರಚಾರ ಪಡೆಯಲಷ್ಟೇ ಹೋಗುತ್ತಿದ್ದಾರೆ. ಇವರಿಂದ ಜನರ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ’ ಎಂದು ಹೇಳಿದರು.

Vishwa News 24

Recent Posts

ಚಿಕನ್ ಪ್ರಿಯರೇ ಎಚ್ಚರ : ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ – vishwanews24

ಚಿಕನ್ ಪ್ರಿಯರೇ ಎಚ್ಚರ : ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ಬೆಂಗಳೂರು: ಚಿಕನ್ ಪ್ರಿಯರೇ ಎಚ್ಚರವಾಗೀರಿ. ರಾಜ್ಯಕ್ಕೆ H5N1 ವೈರಸ್…

43 minutes ago

ಕಾಪು : ಕಾರು-ಲಾರಿ ಮಧ್ಯೆ ಭೀಕರ ಅಪಘಾತ  – ಓರ್ವ ಸಾವು, ಇಬ್ಬರು ಗಂಭೀರ – vishwanews24

ಕಾಪು : ಕಾರು-ಲಾರಿ ಮಧ್ಯೆ ಭೀಕರ ಸ್ತೆ  ಅಪಘಾತ  - ಓರ್ವ ಸಾವು, ಇಬ್ಬರು ಗಂಭೀರ ಕಾಪು: ಮಂಗಳೂರು-ಉಡುಪಿ ರಾಷ್ಟ್ರೀಯ…

53 minutes ago

ಯೋಗೀಶ್ ಗೌಡ ಕೊಲೆ ಪ್ರಕರಣ:  ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ – vishwanews24

ಯೋಗೀಶ್ ಗೌಡ ಕೊಲೆ ಪ್ರಕರಣ:  ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್‌ ಗೌಡ ಹತ್ಯೆ…

21 hours ago

ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ – vishwanews24

ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ ನವದೆಹಲಿ: ಸಚಿವ ಸಂಪುಟ ಪುನಾರಚನೆ ಮಾಡುವಂತೆ…

21 hours ago

ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ – vishwanews24

ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ ಬೆಂಗಳೂರು :ತಾನು 2023ನೇ ಬ್ಯಾಚ್‌ನ ಐಎಎಸ್…

22 hours ago

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ – vishwanews24

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ ನವದೆಹಲಿ : ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಮಹಿಳಾ ಮೀಸಲಾತಿ ಹಾಗೂ…

22 hours ago