ಹಾಸನ: ಸಿದ್ದರಾಮಯ್ಯ ಇರೋದಕ್ಕೆ ಕಾಂಗ್ರೆಸ್‍ಗೆ 70 ಸೀಟ್ ಬಂದಿದೆ. ಸಿದ್ದರಾಮಯ್ಯನವರನ್ನು ಬಿಟ್ಟರೆ ಕಾಂಗ್ರೆಸ್ ಝೀರೊ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‍ನವರು ಜೆಡಿಎಸ್ ಬಗ್ಗೆ ಮಾಡುವ ಟೀಕೆಗೆ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯರಿಂದ ಕಾಂಗ್ರೆಸ್ ಉಳಿದುಕೊಂಡಿದೆ. ಸಿದ್ದರಾಮಯ್ಯ ಇಲ್ಲದಿದ್ದರೆ ಕಾಂಗ್ರೆಸ್ ಮುಗಿದೇ ಹೋಗೋದು. ದೇವೇಗೌಡರನ್ನು, ಕುಮಾರಣ್ಣನನ್ನು ಮುಗಿಸಿದ್ದು ಕಾಂಗ್ರೆಸ್. ದೇವೇಗೌಡರನ್ನು ಪ್ರಧಾನಿ ಹುದ್ದೆಯಿಂದ ಕೆಳಗಿಳಿಸಿದ ಶಾಪದಿಂದಾಗಿ ಕಾಂಗ್ರೆಸ್ ಈ ಪರಿಸ್ಥಿತಿಗೆ ಬಂದಿದೆ ಎಂದು ರೇವಣ್ಣ ಆಕ್ರೋಶ ಹೊರಹಾಕಿದ್ದಾರೆ.
ಗೃಹ ಸಚಿವರನ್ನು ಭೇಟಿ ಮಾಡಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಹೊಳೆನರಸೀಪುರದಲ್ಲಿ ಪೊಲೀಸ್ ಠಾಣೆ ಕಟ್ಟಡ ಕಾಮಗಾರಿ ನಡೆಯುತ್ತಿದೆ. ಇದರ ಕೆಲಸ ಅರ್ಧಕ್ಕೆ ನಿಂತಿದೆ, ಹೀಗಾಗಿ ಸಚಿವರನ್ನು ಭೇಟಿ ಮಾಡಿದೆ. ಅವರ ಭೇಟಿ ವೇಳೆ ಯಾವುದೇ ರಾಜಕೀಯ ಚರ್ಚೆ ಮಾಡಿಲ್ಲ. ರಾಜಕೀಯ ಚರ್ಚೆ ಮಾಡೋಕೆ ನಾನೇನು ರಾಷ್ಟ್ರೀಯ ನಾಯಕನಾ ಎಂದು ರೇವಣ್ಣ ಪ್ರಶ್ನಿಸಿದರು.
MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…
ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…
ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…