ಸಿದ್ದರಾಮಯ್ಯ, ಡಿಕೆಶಿ ಜತೆ 8 ಸಚಿವರಿಂದ ಇಂದು ಪ್ರಮಾಣ ವಚನ – Vishwanews24
ಸಿದ್ದರಾಮಯ್ಯ, ಡಿಕೆಶಿ ಜತೆ 8 ಸಚಿವರಿಂದ ಇಂದು ಪ್ರಮಾಣ ವಚನ
ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನೂತನ ಸಚಿವರು ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಸಿದ್ದರಾಮಯ್ಯ ಅವರು 24ನೇ ಮುಖ್ಯಮಂತ್ರಿಯಾಗಿ ಇಂದು ಪ್ರಮಾನ ವಚನ ಸ್ವೀಕಾರ ಮಾಡಲಿದ್ದಾರೆ. ಹಾಗೂ ಉಪ ಮುಖ್ಯ ಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪದಗ್ರಹಣ ಮಾಡಲಿದ್ದಾರೆ. ಜೊತೆಗೆ 8 ಶಾಸಕರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.
ಡಾ.ಜಿ ಪರಮೇಶ್ವರ್, ಕೆ. ಎಚ್ ಮುನಿಯಪ್ಪ, ಕೆ.ಜೆ ಜಾರ್ಜ್, ಎಂ.ಬಿ ಪಾಟೀಲ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾ ರೆಡ್ಡಿ, ಜಮೀರ್ ಅಹಮದ್ ಖಾನ್ ನೂತನ ಸಚಿವರುಗಳಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
