ಸಿದ್ದರಾಮಯ್ಯ ನಿವಾಸಕ್ಕೆ  ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಸಿ.ಎಂ. ಇಬ್ರಾಹಿಂ ಭೇಟಿ -Vishwanews24

Featured, ರಾಜ್ಯ ನ್ಯೂಸ್

ಸಿದ್ದರಾಮಯ್ಯ ನಿವಾಸಕ್ಕೆ  ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಸಿ.ಎಂ. ಇಬ್ರಾಹಿಂ ಭೇಟಿ -Vishwanews24

ಬೆಂಗಳೂರು : ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಸಿ.ಎಂ. ಇಬ್ರಾಹಿಂ ಅವರು ಇಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಸಿ ಎಂ ಇಬ್ರಾಹಿಂ ಅವರು ಜೆಡಿಎಸ್ ಸೇರಲಿದ್ದಾರೆ ಎಂಬ ಸುದ್ದಿಯ ಬೆನ್ನಲ್ಲೇ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ನಗರದ ಶಿವಾನಂದ ವೃತ್ತದ ಸಮೀಪವಿರುವ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿದ ಇಬ್ರಾಹಿಂ, ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಇಬ್ರಾಹಿಂ, ಇಂದು ಶುಭ ಶುಕ್ರವಾರ, ಎಲ್ಲವೂ ಒಳ್ಳೆಯದಾಗುತ್ತದೆ. ಜೆಡಿಎಸ್ ಸೇರುವ ಬಗ್ಗೆ ದೆಹಲಿಯಲ್ಲಿ ತೀರ್ಮಾನ ಆಗುತ್ತದೆ. ಸಮಯ ಸಿಕ್ಕಾಗ ದೆಹಲಿಗೆ ಹೋಗಿ ಬರುತ್ತೇನೆ ಎಂದರು.

ಮಾರ್ಚ್ 6ರಂದು ಮಂಗಳೂರು ಕಂಬಳೋತ್ಸವ -Vishwanews24