ಬಳ್ಳಾರಿ : ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಮುಟ್ಟಿದ್ರೆ ಸುಟ್ಟೋಗ್ತಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗಲ್ಲ, ಮುಟ್ಟಿದ್ರೆ ಭಸ್ಮ ಆಗ್ತಾರೆ. ಸಿಎಂ, ಕೆಪಿಸಿಸಿ ಸ್ಥಾನ ಖಾಲಿ ಇಲ್ಲ. ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಇದ್ದಾರೆ. ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ಇದ್ದಾರೆ. ಖಾಲಿ ಇದ್ರೆ ತಾನೇ ಚರ್ಚೆ ಎಂದರು.
ಸಿಎಂ ಸಿದ್ದರಾಮಯ್ಯ ಖುರ್ಚಿ ಮುಟ್ಟೋಕೆ ಸಾಧ್ಯ ಏನ್ರಿ? ಅದೊಂಥರ ಬೆಂಕಿ ಅದು, ಬೆಂಕಿ ಮುಟ್ಟಿದ್ರೆ ಸುಟ್ಟೋಗ್ತಾರೆ. ಸಿದ್ದರಾಮಯ್ಯ ಬೆಂಕಿ ಇದ್ದಂತೆ, ನಾವು ಟಗರು ಅಂತೀವಿ. ಆ ಬೆಂಕಿ ಮುಟ್ಟೋಕೆ ಸಾಧ್ಯವಿಲ್ಲ, ಮುಟ್ಟಿದ್ರೆ ಭಸ್ಮ ಆಗ್ತಾರೆ ಎಂದು ಹೇಳಿದರು.
ನಮ್ಮ ಪಕ್ಷ ಹೈಕಮಾಂಡ್ ಪಕ್ಷ, ಹೈ ಕಮಾಂಡ್ ನಿರ್ಧಾರಕ್ಕೆ ಬದ್ಧ. ಹೈಕಮಾಂಡ್ ಬದಲಾವಣೆ ಮಾಡಬೇಕು ಅಂತ ನಿರ್ಧಾರ ಮಾಡಿದ್ರೆ ನಾವು ಅಭಿಪ್ರಾಯ ತಿಳಿಸಬಹುದು. ಆದರೆ ಹೈಕಮಾಂಡ್ ಯಾವುದೇ ನಿರ್ಧಾರಕ್ಕೆ ಇನ್ನೂ ಬಂದಿಲ್ಲ. ನಮ್ಮ ಪಕ್ಷದವರು ಯಾರೂ ಕೂಡ ಸಿದ್ದರಾಮಯ್ಯ ಬದಲಾವಣೆ ಮಾಡಲಿ ಅಂತಲೂ ಹೇಳಿಲ್ಲಾ. ಎಲ್ಲಾ ಸಮಾಜಕ್ಕೂ ಸಿಎಂ ಆಗಬೇಕು ಅಂತ ಆಸೆ ಇರುತ್ತೆ. ದಲಿತ, ಅಲ್ಪಸಂಖ್ಯಾತ, ಎಸ್ಸಿ, ಎಸ್ಟಿ, ಲಿಂಗಾಯತ ಸಮುದಾಯ ಎಲ್ಲರೂ ಸಿಎಂ ಆಗಬೇಕು ಅಂತಾರೆ. ತೀರ್ಮಾನ ಹೈ ಕಮಾಂಡ್ ಗೆ ಬಿಟ್ಟಿದ್ದು ಎಂದಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…