ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು (ಮೇ 29) ಅಂಗೀಕರಿಸಿದ್ದಾರೆ ಎಂದು ತಿಳಿದುಬಂದಿದೆ.
ಸಂವಿಧಾನಬದ್ಧವಾಗಿ ರಾಜೀನಾಮೆ ಪತ್ರವನ್ನು ಅಂಗೀಕರಿಸಿದ್ದಾರೆ. ಈ ಬಗ್ಗೆ ಲೋಕಭವನದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಆದಾಗ್ಯೂ ಹೊಸ ಸರ್ಕಾರ ರಚನೆಯಾಗುವವರೆಗೆ ಇನ್ನೂ 2-3 ದಿನಗಳ ಕಾಲ ಸಿದ್ದರಾಮಯ್ಯ ಅವರು ಹಂಗಾಮಿ ಸಿಎಂ ಆಗಿ ಮುಂದುವರಿಯಲಿದ್ದಾರೆ.
ರಾಜ್ಯಪಾಲರು ರಾಜಧಾನಿಯಲ್ಲಿ ಇಲ್ಲದ ಕಾರಣ, ಅವರ ಅನುಪಸ್ಥಿತಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಗುರುವಾರ ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಹಸ್ತಾಂತರಿಸಿದ್ದರು. ರಾಜೀನಾಮೆ ಪತ್ರವನ್ನ ಕಾರ್ಯದರ್ಶಿಗಳು ಸ್ವೀಕರಿಸಿದ್ದರೂ, ಸಂವಿಧಾನದ ನಿಯಮಾವಳಿಗಳ ಪ್ರಕಾರ ರಾಜ್ಯಪಾಲರು ಖುದ್ದಾಗಿ ಸಹಿ ಮಾಡಬೇಕಿತ್ತು. ಗುರುವಾರ (ಮೇ 28) ರಾತ್ರಿ ಇಂದೋರ್‌ನಿಂದ ಬೆಂಗಳೂರಿಗೆ ಆಗಮಿಸಿದ್ದ ರಾಜ್ಯಪಾಲರು ಇಂದು ಬೆಳಗ್ಗೆಯೇ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…