ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಗೂಂಡಾಗಳಿಗೆ ಕೆಲಸ ಸಿಕ್ಕಿದೆ : ಆರ್.ಅಶೋಕ್ – vishwanews24
ರಾಜ್ಯದಲ್ಲಿ ಸಿದ್ದರಾಮಯ್ಯ ಅವರ 6ನೇ ಗ್ಯಾರಂಟಿ ಗೂಂಡಾ ಭಾಗ್ಯ ಜಾರಿಗೆ: BJP ವ್ಯಂಗ್ಯ
ಮೈಸೂರು: ರಾಜ್ಯ ಸರ್ಕಾರ ದಿವಾಳಿಯಾಗಿದ್ದು, ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಮಿತಿಮೀರಿದೆ,. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ 6ನೇ ಗ್ಯಾರಂಟಿ ಗೂಂಡಾ ಭಾಗ್ಯ ಜಾರಿಗೆ ತಂದಿದ್ದಾರೆಂದು ಬಿಜೆಪಿ ವ್ಯಂಗ್ಯವಾಡಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ರಾಜ್ಯ ಸರ್ಕಾರ ದಿವಾಳಿಯಾಗಿದ್ದು, ರೈತರಿಗೆ ಬ್ಯಾಂಕ್ಗಳು ಸಾಲ ನೀಡದ ಕಾರಣ, ಮೈಕ್ರೋ ಫೈನಾನ್ಸ್ ಕಂಪನಿಗಳನ್ನು ಅವಲಂಬಿಸುವಂತಾಗಿದೆ. ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಗೂಂಡಾಗಳಿಗೆ ಕೆಲಸ ಸಿಕ್ಕಿದೆ ಎಂದು ಕಿಡಿಕಾರಿದರು.
ಫೆ. 1ರಿಂದ ಎರಡು ದಿನ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ – vishwanews24
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರನೇ ಗ್ಯಾರಂಟಿ ‘ಗೂಂಡಾ ಭಾಗ್ಯ’ ಪರಿಚಯಿಸಿರುವುದರಿಂದ, ಗೂಂಡಾಗಳು ಅತ್ಯಂತ ಸಮರ್ಪಣಾ ಭಾವದಿಂದ ತಮ್ಮ ಕೆಲಸವನ್ನು ಮಾಡುತ್ತಿದ್ದಾರೆಂದು ವ್ಯಂಗ್ಯವಾಡಿದರು.
