ಬೆಂಗಳೂರು : “ಬಡವರ ನಿವೇಶನ ಕಬಳಿಸಿ, ಲಜ್ಜೆಬಿಟ್ಟು ಸಿಎಂ ಹುದ್ದೆಯಲ್ಲಿ ಮುಂದುವರಿಯುತ್ತಿರುವ ಸಿದ್ದರಾಮಯ್ಯನವರೇ ಒಂದು ಕ್ಷಣವೂ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಯುವ ನೈತಿಕತೆಯನ್ನು ಇಂದು ತಾವು ಉಳಿಸಿಕೊಂಡಿಲ್ಲ. ರಾಜೀನಾಮೆ ನೀಡಿ, ತನಿಖೆ ಎದುರಿಸಿ” ಎಂದು ಬಿಜೆಪಿ ಒತ್ತಾಯಿಸಿದೆ.
ರಾಜ್ಯಪಾಲರ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಸಂಬಂಧ ಮಂಗಳವಾರ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಬಿಜೆಪಿ, “ಸಿದ್ದರಾಮಯ್ಯನವರೇ ನೀವು ಕಟ್ಟಿರುವ ಸುಳ್ಳಿನ ಸಾಮ್ರಾಜ್ಯ ಸಂಪೂರ್ಣ ಕುಸಿದಿದೆ. ಇನ್ನು ಗೌರವಯುತವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ” ಎಂದು ಆಗ್ರಹಿಸಿದೆ.
ದಲಿತರ ಭೂಮಿಯನ್ನು ಅಕ್ರಮವಾಗಿ ಕಬಳಿಸಿ, ಬಡವರ ಪಾಲಿಗೆ ಸೇರಬೇಕಾಗಿದ್ದ ಸೈಟುಗಳನ್ನು ತಮ್ಮ ಹೆಸರಿಗೆ ಮಾಡಿಕೊಂಡಿದ್ದ ಸಿಎಂ ಸಿದ್ದರಾಮಯ್ಯ ಅವರು, ತಮ್ಮ ವಿರುದ್ಧ ತನಿಖೆಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿರುವುದು ಸ್ವಾಗತಾರ್ಹ. ತಮ್ಮ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳಲು ಘನತೆವೆತ್ತ ರಾಜ್ಯಪಾಲರ ಮೇಲೆ ಕೀಳು ಮಟ್ಟದ ರಾಜಕೀಯಕ್ಕೆ ಕಾಂಗ್ರೆಸ್ ನ ನಾಯಕರು ಮುಂದಾಗಿದ್ದರು. ಆದರೆ ನ್ಯಾಯಾಲಯ ರಾಜ್ಯಪಾಲರ ನಡೆಯನ್ನು ಎತ್ತಿ ಹಿಡಿದು, ಭ್ರಷ್ಟರಿಗೆ ಭಾರತದಲ್ಲಿ ಜಾಗವಿಲ್ಲ ಎಂಬುದನ್ನು ಪುನರುಚ್ಛರಿಸಿದೆ ಎಂದು ಬಿಜೆಪಿ ತಿಳಿಸಿದೆ.
ಸಿದ್ದರಾಮಯ್ಯ ಅವರಿಗೆ ಈ ನೆಲದ ಕಾನೂನಿನ ಬಗ್ಗೆ, ಸಂವಿಧಾನದ ಬಗ್ಗೆ , ನ್ಯಾಯಾಲಯದ ಬಗ್ಗೆ ಕಿಂಚಿತ್ತಾದರೂ ಗೌರವವಿದ್ದರೆ, ಭಂಡತನವನ್ನು ಮುಂದುವರೆಸದೆ, ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಒತ್ತಾಯಿಸಿದೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…