Featured

ಸಿದ್ದರಾಮಯ್ಯ ಹಾದಿ ತಪ್ಪಿಸುವುದರಲ್ಲಿ “ಎಕ್ಸ್ ಪರ್ಟ್” : ವಿ.ಸುನೀಲ್ ಕುಮಾರ್ – vishwanews24

ಸಿದ್ದರಾಮಯ್ಯ ಹಾದಿ ತಪ್ಪಿಸುವುದರಲ್ಲಿ “ಎಕ್ಸ್ ಪರ್ಟ್” : ವಿ.ಸುನೀಲ್ ಕುಮಾರ್

ಬೆಂಗಳೂರು: ರಾಜಕೀಯವಾಗಿ ಸಂಕಷ್ಟ ಬಂದಾಗಲೆಲ್ಲ ಜಾತಿ ಗಣತಿ ವರದಿ ಜಾರಿ ವಿಚಾರ ಪ್ರಸ್ತಾಪಿಸಿ ಹಿಂದುಳಿದ ಹಾಗೂ ಶೋಷಿತ ವರ್ಗದ ದಾರಿ ತಪ್ಪಿಸಿವುದು ಸಿಎಂ ಸಿದ್ದರಾಮಯ್ಯರಿಗೆ ಚಟವಾಗಿ ಬಿಟ್ಟಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ ಕುಮಾರ್ ಟೀಕಿಸಿದ್ದಾರೆ.

ಸಿದ್ದರಾಮಯ್ಯರಿಗೆ ಜಾತಿ ಗಣತಿ ವರದಿ ಎನ್ನುವುದು ಖುರ್ಚಿ ಭದ್ರಪಡಿಸಿಕೊಳ್ಳುವುದಕ್ಕಾಗಿನ ಮಹಾನ್ ಅಸ್ತ್ರವಾಗಿದೆ. ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷೆ ಜಾರಿ, ಅಹಿಂದ ವರ್ಗಕ್ಕೆ ಅನ್ಯಾಯ ಎಂದು ಭಾಷಣ ಬಿಗಿದು ಬಚಾವ್ ಆಗುವುದು ಚಾಳಿಯಾಗಿ ಬಿಟ್ಟಿದೆ. ಪೊಲೀಸ್ ಭಾಷೆಯಲ್ಲಿ ಹೇಳಬೇಕೆಂದರೆ ಇದು ವೃತ್ತಿಪರ ಆರೋಪಿ ಎಸಗುವ “ಗಮನ ಸೆಳೆಯುವ ತಂತ್ರ” ಎಂದು ವ್ಯಂಗ್ಯವಾಡಿದ್ದಾರೆ.

ಸಿದ್ದರಾಮಯ್ಯ ಹಾದಿ ತಪ್ಪಿಸುವುದರಲ್ಲಿ “ಎಕ್ಸ್ ಪರ್ಟ್” ! ಇಡಿ ಕರ್ನಾಟಕವನ್ನು ನಾಲ್ಕು ದಶಕಗಳಿಂದ ಹಾದಿ ತಪ್ಪಿಸುತ್ತಲೇ ಬಂದಿದ್ದೀರಿ. ರಾಮಕೃಷ್ಣ ಹೆಗಡೆ, ದೇವೇಗೌಡ, ಎಸ್.ಎಂ.ಕೃಷ್ಣರಂಥ ಘಟಾನುಘಟಿಗಳ ಪಥವನ್ನೇ ಬದಲಿಸಿದ ನಿಮಗೆ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಯಾವುದಾದರೂ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ನೀಡಬೇಕಿದೆ ಎಂದು ಟೀಕಿಸಿದ್ದಾರೆ.

ಮುಡಾ ವಿಚಾರದಲ್ಲಿ ಸಂಕಷ್ಟ ಎದುರಾಗುತ್ತಿದ್ದಂತೆ ನೀವು ಜಾತಿ ಗಣತಿ ವಿಚಾರವನ್ನು ಮುಂದಿಟ್ಟುಕೊಂಡು ಹಿಂದುಳಿದ ಹಾಗೂ ಶೋಷಿತ ವರ್ಗದ ದಿಕ್ಕು ತಪ್ಪಿಸಲು ಹೊರಟಿದ್ದೀರಿ. ಎಷ್ಟು ದಿನ ಈ ನಾಟಕ ? ಅಧಿಕಾರಕ್ಕೆ ಬಂದಾಗಿನಿಂದ ಜಾತಿ ಗಣತಿ ಅನುಷ್ಠಾನ ಮಾಡುತ್ತೇನೆ ಎಂದು ಹೇಳುತ್ತಲೇ ಬಂದಿದ್ದೀರೇ ವಿನಾ ಆ ದಿಶೆಯಲ್ಲಿ ಒಂದೇ ಒಂದು ಹೆಜ್ಜೆ ಮುಂದಿಟ್ಟಿಲ್ಲ. ಹಲವು ಕಾರಣದಿಂದ ಜಾರಿಯಾಗಿಲ್ಲ ಎಂದು ಮಗುಮ್ಮಾಗಿ ಹೇಳಿದರೆ ಸಾಕೆ ? ಆ ಕಾರಣವನ್ನು ಬಹಿರಂಗಪಡಿಸಿ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಭಯವೇ ? ಅಥವಾ ವರದಿಯಲ್ಲಿ ಲೋಪಗಳಿವೆಯೇ ? ಯಾವುದನ್ನೂ ಸ್ಪಷ್ಟಪಡಿಸದೇ “ಜಾರಿ ಜಪ” ಎಷ್ಟು ವರ್ಷ ಮುಂದುವರಿಸುತ್ತೀರಿ ? ಎಂದು ಸುನೀಲ್ ಕುಮಾರ್ ಪ್ರಶ್ನಿಸಿದ್ದಾರೆ.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

4 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

5 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

5 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

8 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

8 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

9 hours ago