ಬೆಂಗಳೂರು: ‘ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ 75ನೇ ವರ್ಷದ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಆಗಸ್ಟ್ 3ರಂದು ದಾವಣಗೆರೆಯಲ್ಲಿ ಅಮೃತ ಮಹೋತ್ಸವ ಹಮ್ಮಿಕೊಳ್ಳಲಾಗಿದೆ. ಸಮಾವೇಶವನ್ನು ಎಐಸಿಸಿ ನಾಯಕ ರಾಹುಲ್ ಗಾಂಧಿ ಉದ್ಘಾಟಿಸಲಿದ್ದಾರೆ’ ಎಂದು ‘ಸಿದ್ದರಾಮಯ್ಯ–75 ಅಭಿನಂದನಾ ಸಮಿತಿ’ಯ ಗೌರವಾಧ್ಯಕ್ಷರೂ ಆಗಿರುವ ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ನಾಲ್ಕು ದಶಕಗಳಿಂದ ಸಿದ್ದರಾಮಯ್ಯ ಅವರು ರಾಜಕೀಯದಲ್ಲಿದ್ದಾರೆ. ಸಾಮಾಜಿಕ ನ್ಯಾಯದ ಪರವಾಗಿ ಹಲವು ಹೋರಾಟಗಳಲ್ಲಿ ಭಾಗಿಯಾಗಿ ಪ್ರೊ. ನಂಜುಂಡಸ್ವಾಮಿ ಜೊತೆ ಗುರುತಿಸಿಕೊಂಡರು. ರಾಜಕೀಯ ಕ್ಷೇತ್ರದಲ್ಲಿ ಏಳುಬೀಳು ಕಂಡಿದ್ದಾರೆ. ಅವರ ಅಭಿಮಾನಿಗಳು, ಹಿತೈಷಿ ಗಳ ಒತ್ತಾಸೆಯಿಂದ ಅಮೃತ ಮಹೋ ತ್ಸವ ಮಾಡಲಾಗುತ್ತಿದೆ’ ಎಂದರು.
‘ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವಾರು ಕಾಂಗ್ರೆಸ್ ನಾಯಕರು ಭಾಗವಹಿಸಲಿದ್ದಾರೆ’ ಎಂದರು.
ಕಾಂಗ್ರೆಸ್ ಮುಖಂಡರಾದ ಎಚ್.ಸಿ. ಮಹದೇವಪ್ಪ, ನಜೀರ್ ಅಹಮದ್, ಭೈರತಿ ಸುರೇಶ್, ಜಯಮಾಲಾ, ಎಚ್. ಆಂಜನೇಯ, ಎಚ್. ಹನುಮಂತಯ್ಯ, ಎಸ್.ಎಸ್. ಮಲ್ಲಿಕಾರ್ಜುನ, ಪಿ.ಜಿ.ಆರ್. ಸಿಂಧ್ಯಾ, ಬಿ.ಎಲ್. ಶಂಕರ್ ಇದ್ದರು.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…