Featured

ಸಿದ್ದರಾಮಯ್ಯ 75ನೇ ವರ್ಷದ ಜನ್ಮದಿನಾಚರಣೆ ಹಿನ್ನೆಲೆ : ಆ. 3ಕ್ಕೆ ದಾವಣಗೆರೆಯಲ್ಲಿ ಅಮೃತ ಮಹೋತ್ಸವ – Vishwanews24

ಸಿದ್ದರಾಮಯ್ಯ 75ನೇ ವರ್ಷದ ಜನ್ಮದಿನಾಚರಣೆ ಹಿನ್ನೆಲೆ : ಆ. 3ಕ್ಕೆ ದಾವಣಗೆರೆಯಲ್ಲಿ ಅಮೃತ ಮಹೋತ್ಸವ

ಬೆಂಗಳೂರು: ‘ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ 75ನೇ ವರ್ಷದ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಆಗಸ್ಟ್ 3ರಂದು ದಾವಣಗೆರೆಯಲ್ಲಿ ಅಮೃತ ಮಹೋತ್ಸವ ಹಮ್ಮಿಕೊಳ್ಳಲಾಗಿದೆ. ಸಮಾವೇಶವನ್ನು ಎಐಸಿಸಿ ನಾಯಕ ರಾಹುಲ್ ಗಾಂಧಿ ಉದ್ಘಾಟಿಸಲಿದ್ದಾರೆ’ ಎಂದು‌ ‘ಸಿದ್ದರಾಮಯ್ಯ–75 ಅಭಿನಂದನಾ ಸಮಿತಿ’ಯ ಗೌರವಾಧ್ಯಕ್ಷರೂ ಆಗಿರುವ ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ನಾಲ್ಕು ದಶಕಗಳಿಂದ ಸಿದ್ದರಾಮಯ್ಯ ಅವರು ರಾಜಕೀಯದಲ್ಲಿದ್ದಾರೆ. ಸಾಮಾಜಿಕ ನ್ಯಾಯದ ಪರವಾಗಿ ಹಲವು ಹೋರಾಟಗಳಲ್ಲಿ ಭಾಗಿಯಾಗಿ ಪ್ರೊ. ನಂಜುಂಡಸ್ವಾಮಿ ಜೊತೆ ಗುರುತಿಸಿಕೊಂಡರು. ರಾಜಕೀಯ ಕ್ಷೇತ್ರದಲ್ಲಿ ಏಳುಬೀಳು ಕಂಡಿದ್ದಾರೆ. ಅವರ ಅಭಿಮಾನಿಗಳು, ಹಿತೈಷಿ ಗಳ ಒತ್ತಾಸೆಯಿಂದ ಅಮೃತ ಮಹೋ ತ್ಸವ ಮಾಡಲಾಗುತ್ತಿದೆ’ ಎಂದರು.

‘ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವಾರು ಕಾಂಗ್ರೆಸ್ ನಾಯಕರು ಭಾಗವಹಿಸಲಿದ್ದಾರೆ’ ಎಂದರು.

ಕಾಂಗ್ರೆಸ್‌ ಮುಖಂಡರಾದ ಎಚ್.ಸಿ. ಮಹದೇವಪ್ಪ, ನಜೀರ್ ಅಹಮದ್, ಭೈರತಿ ಸುರೇಶ್, ಜಯಮಾಲಾ, ಎಚ್. ಆಂಜನೇಯ, ಎಚ್. ಹನುಮಂತಯ್ಯ, ಎಸ್.ಎಸ್. ಮಲ್ಲಿಕಾರ್ಜುನ, ಪಿ.ಜಿ.ಆರ್. ಸಿಂಧ್ಯಾ, ಬಿ.ಎಲ್. ಶಂಕರ್ ಇದ್ದರು.‌

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

12 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

13 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

13 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

14 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

14 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago