ಕಳೆದ 97 ವರ್ಷಗಳಿಂದ ದೇಶದಾದ್ಯಂತ ಅವಿರತ ಸಾರ್ಥಕ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ದೇಶಭಕ್ತ ಸೇವಾ ಸಂಘಟನೆ ಆರ್.ಎಸ್.ಎಸ್. ವಿರುದ್ಧ ಮತಿಭ್ರಮಣೆಯಾದಂತೆ ವರ್ತಿಸಿ ಅತ್ಯಂತ ಕೀಳು ಮಟ್ಟದ ಹೇಳಿಕೆಗಳನ್ನು ನೀಡುತ್ತಾ ತನ್ನ ಬೌದ್ಧಿಕ ದಿವಾಳಿತನವನ್ನು ಪ್ರದರ್ಶಿಸುತ್ತಿರುವ ಮಾಜಿ ಸಿ.ಎಂ. ಸಿದ್ಧರಾಮಯ್ಯ ಚಡ್ಡಿ ಸುಡುವ ಅಭಿಯಾನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಸಡ್ಡು ಹೊಡೆದಿದೆ.
ಆರ್.ಎಸ್.ಎಸ್ ವಿರುದ್ಧ ದ್ವೇಷವನ್ನು ಪ್ರದರ್ಶಿಸುವ ಭರದಲ್ಲಿ ಮನುಷ್ಯನ ಮಾನ ಮುಚ್ಚುವ ಸಾಧನವಾಗಿರುವ ಚಡ್ಡಿಯನ್ನು ಸುಡುವ ಮೂಲಕ ಕಾಂಗ್ರೆಸ್ ಪಕ್ಷ ತನ್ನ ಮಾನ ಮರ್ಯಾದೆಯನ್ನು ತಾನೇ ಹರಾಜು ಹಾಕಿಕೊಂಡಿದೆ. ಇದಕ್ಕೆ ಪೂರಕವಾಗಿ ಸಿದ್ಧರಾಮಯ್ಯ ಮಹತ್ವಾಕಾಂಕ್ಷಿ ಚಡ್ಡಿ ಸುಡುವ ಅಭಿಯಾನವನ್ನು ಖಂಡಿಸಿ ಜಿಲ್ಲಾ ಬಿಜೆಪಿ ಚಡ್ಡಿಗಳನ್ನು ಪೂರೈಸಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.
ಜಿಲ್ಲೆಯಾದ್ಯಂತ ಪಕ್ಷದ ಕಾರ್ಯಕರ್ತರು ತಮ್ಮ ಬಳಕೆಯಾಗದೆ ಉಳಿದಿರುವ ಚಡ್ಡಿಗಳನ್ನು ಜೋಡಿಸಿ ನಾಳೆ ಸಂಜೆಯೊಳಗೆ ಬಿಜೆಪಿ ಜಿಲ್ಲಾ ಕಚೇರಿಗೆ ತಲುಪಿಸುವ ಮೂಲಕ ಚಡ್ಡಿಗಳನ್ನು ಸಿದ್ಧರಾಮಯ್ಯಗೆ ತಲುಪುವಂತೆ ಬೆಂಗಳೂರು ಕಾಂಗ್ರೆಸ್ ಕಚೇರಿಗೆ ಕಳುಹಿಸಿಕೊಡಲು ಸಹಕರಿಸುವಂತೆ ಅವರು ಕರೆ ನೀಡಿದ್ದಾರೆ.
ಮುಳುಗುತ್ತಿರುವ ಹಡಗು ಕಾಂಗ್ರೆಸ್ಸನ್ನು ಸಾಲು ಸಾಲಾಗಿ ತೊರೆಯುತ್ತಿರುವ ಪ್ರಭಾವಿ ಕಾಂಗ್ರೆಸ್ ನಾಯಕರು ಒಂದೆಡೆಯಾದರೆ ನಾಯಕತ್ವದ ಕೊರತೆ, ಮುಸುಕಿನ ಗುದ್ದಾಟದ ಬೇಗುದಿಯಿಂದ ಸಿದ್ಧರಾಮಯ್ಯ ಸ್ಥಿತಿ ಕೈಲಾಗದವನು ಮೈ ಪರಚಿಕೊಂಡಂತೆ ಎಂಬಂತಾಗಿದೆ.
ಮಾಜಿ ಮುಖ್ಯ ಮಂತ್ರಿ ಸಿದ್ಧರಾಮಯ್ಯ ಸಹಿತ ಯಾವುದೇ ಕಾಂಗ್ರೆಸ್ ನಾಯಕರು ಮೌಲ್ಯಾಧಾರಿತ ರಾಜಕಾರಣವನ್ನು ಮರೆತು ದ್ವೇಷ ಕಾರುವ ದಿಕ್ಕಿನಲ್ಲಿ ಕೀಳು ಮಟ್ಟದ ಕೊಳಕು ರಾಜಕೀಯ ನೀತಿ ಅನುಸರಿಸಿದರೆ ಅದೇ ದಾಟಿಯಲ್ಲಿ ಪ್ರತಿಕ್ರಯಿಸಲು ಬಿಜೆಪಿ ಕಾರ್ಯಕರ್ತರು ಸದಾ ಸಿದ್ಧರಿದ್ದಾರೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…