ಬೆಂಗಳೂರು : ಬಿಜೆಪಿಯಿಂದ ‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆಗೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ತಡೆಯಾಜ್ಞೆ ನೀಡಿದೆ.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕುರಿತಾಗಿ ಸಿದ್ದು ನಿಜ ಕನಸುಗಳು ಪುಸ್ತಕ ವಿವಾದಕ್ಕೆ ಕಾರಣವಾಗಿದ್ದು, ಸದ್ಯ ಈ ವಿವಾದ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಭಾರೀ ಜಟಾಪಟಿಗೆ ಕಾರಣವಾಗಿದೆ.
‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಸಲು ಇಂದು ಬಿಜೆಪಿ ನಿರ್ಧರಿಸಿತ್ತು, ಆದರೆ ಬಿಜೆಪಿಯಿಂದ ‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆಗೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ತಡೆಯಾಜ್ಞೆ ನೀಡಿದೆ.ತಡೆ ಕೋರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅರ್ಜಿ ಸಲ್ಲಿಸಿದ್ದರು, ಇದೀಗ ಪುಸ್ತಕ ಬೆಂಗಳೂರಿನ 60 ನೇ ಸಿಸಿಹೆಚ್ ನ್ಯಾಯಾಲಯ ತಡೆ ನೀಡಿದೆ.
ಈ ಸಂಬಂಧ ಕಾರಣ ಕೇಳಿ ಸಚಿವ ಅಶ್ವಥ್ ನಾರಾಯಣ್ ಸೇರಿ ಹಲವರಿಗೆ ಕೋರ್ಟ್ ನೋಟಿಸ್ ನೀಡಲಾಗಿದೆ. ಸಿದ್ದು ನಿಜ ಕನಸುಗಳು ಪುಸ್ತಕ ಬಿಡುಗಡೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಟೌನ್ ಹಾಲ್ ಮುಂದೆ ಪ್ರತಿಭಟನೆ ನಡೆಸಿದ್ದು, ಕರ ಪತ್ರಗಳನ್ನು ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿಜ ಕನಸುಗಳು ಪುಸ್ತಕ ಇದೀಗ ವಿವಾದ ಕುರಿತು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿದೆ. ಗಲಭೆ ನಡೆಸಿದ ಕೆಲವು ಕೈ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…