ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಇತ್ತೀಚೆಗೆ ಎಲ್ಲ ಕಂಟಕಗಳು ಒಂದೇ ಬಾರಿ ಆಗಮಿಸುತ್ತಿದ್ದು ಚಿಂತೆಯನ್ನುಂಟು ಮಾಡಿದೆ. ಸಿದ್ದರಾಮಯ್ಯನವರ ರಾಜಕೀಯ ಬದ್ಧ ವೈರಿಗಳಾದ ದೇವೇಗೌಡರ ಜಾತ್ಯಾತೀತ ಜನತಾ ದಳದೊಂದಿಗೆ ಕಾಂಗ್ರೆಸ್ ಹೈಕಮಾಂಡ್ ಸೇರಿ ಯಾವಾಗ ಸಮ್ಮಿಶ್ರ ಸರಕಾರ ರಚನೆ ಮಾಡಿತೋ ಅಂದಿನಿಂದ ಸಿದ್ದರಾಮಯ್ಯರವರು ಮೂಲೆಗುಂಪಾದರು, ಅವರ ಆಪ್ತರಿಗೆ ಸಚಿವ ಸ್ಥಾನ ದೊರಕದೇ ಅವರೂ ದೂರವಾದರು. ಇಷ್ಟು ವರ್ಷಗಳ ಕಾಲ ಸಿದ್ದರಾಮಯ್ಯರ ಜೊತೆಗಿದ್ದ ಕುರುಬ ಸಮುದಾಯ ಕೂಡ ಇವರೊಂದಿಗೆ ಮುನಿಸಿಕೊಂಡು ಅಲ್ಲಲ್ಲಿ ಪ್ರತಿಭಟನೆ ಸಹ ನಡೆಸಿತ್ತು.
ಈ ಬೆಳವಣಿಗೆಗಳಿಂದ ನೊಂದಿರುವ ಸಿದ್ದರಾಮಯ್ಯ ನವರು ಧರ್ಮಸ್ಥಳದ ಶಾಂತಿವನದಲ್ಲಿರುವ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ವಿಶ್ರಾಂತಿ ಪಡೆದುಕೊಳ್ಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿಯೇ ಸಿದ್ದರಾಮಯ್ಯ ರಿಗೆ ಮತ್ತೊಂದು ಕಂಟಕ ಎದುರಾಗಿದೆ. 25 ವರ್ಷದ ಹಳೆಯ ಪ್ರಕರಣಕ್ಕೆ ಮರುಜೀವ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯನವರು ಈ ಮುಖ್ಯಮಂತ್ರಿ ಆಗಿದ್ದಾಗಲೂ ಸೇರಿದಂತೆ 25 ವರ್ಷಗಳಿಂದ ಕಾನೂನು ಹೋರಾಟ ನಡೆಸಿಕೊಂಡು ಬಂದಿದ್ದರು.
ಸಿದ್ದರಾಮಯ್ಯ ಅಂದು ಉಪಮುಖ್ಯಮಂತ್ರಿ ಆಗಿದ್ದ ಸಂದರ್ಭ ನಗರಾಭಿವೃದ್ಧಿ ಪ್ರಾಧಿಕಾರದ ಕಾಯಿದೆ ಉಲ್ಲಂಘಿಸಿ ವಿಜಯನಗರ ಎಂಬಲ್ಲಿ 2ನೇ ಹಂತದಲ್ಲಿ ಅಕ್ರಮ ನಿವೇಶನ ಪಡೆದಿದ್ದರು ಎನ್ನಲಾದ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸಲು ಮೈಸೂರಿನ 2ನೇ ಪ್ರಧಾನ ಸತ್ರ ನ್ಯಾಯಾಲಯ ಇಂದು ಆದೇಶ ಹೊರಡಿಸಿದೆ. ಈ ಕಾನೂನಿನ ಕಂಟಕದಿಂದ ಸಿದ್ದರಾಮಯ್ಯರು ಹೇಗೆ ಪಾರಾಗುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…