ರಾಜ್ಯ ನ್ಯೂಸ್

ಸಿದ್ಧರಾಮಯ್ಯನವರ ಮೇಲೆ ಎಫ್.ಐ.ಆರ್..

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಇತ್ತೀಚೆಗೆ ಎಲ್ಲ ಕಂಟಕಗಳು ಒಂದೇ ಬಾರಿ ಆಗಮಿಸುತ್ತಿದ್ದು ಚಿಂತೆಯನ್ನುಂಟು ಮಾಡಿದೆ. ಸಿದ್ದರಾಮಯ್ಯನವರ ರಾಜಕೀಯ ಬದ್ಧ ವೈರಿಗಳಾದ ದೇವೇಗೌಡರ ಜಾತ್ಯಾತೀತ ಜನತಾ ದಳದೊಂದಿಗೆ ಕಾಂಗ್ರೆಸ್ ಹೈಕಮಾಂಡ್ ಸೇರಿ ಯಾವಾಗ ಸಮ್ಮಿಶ್ರ ಸರಕಾರ ರಚನೆ ಮಾಡಿತೋ ಅಂದಿನಿಂದ ಸಿದ್ದರಾಮಯ್ಯರವರು ಮೂಲೆಗುಂಪಾದರು, ಅವರ ಆಪ್ತರಿಗೆ ಸಚಿವ ಸ್ಥಾನ ದೊರಕದೇ ಅವರೂ ದೂರವಾದರು. ಇಷ್ಟು ವರ್ಷಗಳ ಕಾಲ ಸಿದ್ದರಾಮಯ್ಯರ ಜೊತೆಗಿದ್ದ ಕುರುಬ ಸಮುದಾಯ ಕೂಡ ಇವರೊಂದಿಗೆ ಮುನಿಸಿಕೊಂಡು ಅಲ್ಲಲ್ಲಿ ಪ್ರತಿಭಟನೆ ಸಹ ನಡೆಸಿತ್ತು.

ಈ ಬೆಳವಣಿಗೆಗಳಿಂದ ನೊಂದಿರುವ ಸಿದ್ದರಾಮಯ್ಯ ನವರು ಧರ್ಮಸ್ಥಳದ ಶಾಂತಿವನದಲ್ಲಿರುವ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ವಿಶ್ರಾಂತಿ ಪಡೆದುಕೊಳ್ಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿಯೇ ಸಿದ್ದರಾಮಯ್ಯ ರಿಗೆ ಮತ್ತೊಂದು ಕಂಟಕ ಎದುರಾಗಿದೆ. 25 ವರ್ಷದ ಹಳೆಯ ಪ್ರಕರಣಕ್ಕೆ ಮರುಜೀವ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯನವರು ಈ ಮುಖ್ಯಮಂತ್ರಿ ಆಗಿದ್ದಾಗಲೂ ಸೇರಿದಂತೆ 25 ವರ್ಷಗಳಿಂದ ಕಾನೂನು ಹೋರಾಟ ನಡೆಸಿಕೊಂಡು ಬಂದಿದ್ದರು.

ಸಿದ್ದರಾಮಯ್ಯ ಅಂದು ಉಪಮುಖ್ಯಮಂತ್ರಿ ಆಗಿದ್ದ ಸಂದರ್ಭ ನಗರಾಭಿವೃದ್ಧಿ ಪ್ರಾಧಿಕಾರದ ಕಾಯಿದೆ ಉಲ್ಲಂಘಿಸಿ ವಿಜಯನಗರ ಎಂಬಲ್ಲಿ 2ನೇ ಹಂತದಲ್ಲಿ ಅಕ್ರಮ ನಿವೇಶನ ಪಡೆದಿದ್ದರು ಎನ್ನಲಾದ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್​ ದಾಖಲಿಸಲು ಮೈಸೂರಿನ 2ನೇ ಪ್ರಧಾನ ಸತ್ರ ನ್ಯಾಯಾಲಯ ಇಂದು ಆದೇಶ ಹೊರಡಿಸಿದೆ. ಈ ಕಾನೂನಿನ ಕಂಟಕದಿಂದ ಸಿದ್ದರಾಮಯ್ಯರು ಹೇಗೆ ಪಾರಾಗುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

 

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

11 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

13 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

13 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

13 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

13 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

14 hours ago