ಬೆಂಗಳೂರು : ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು, ಸಿದ್ಧಾರ್ಥ್ ಅವರ ದಾರುಣ ಸಾವಿನ ಬಗ್ಗೆ ಸರ್ಕಾರ ಸೂಕ್ತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರುವ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ವಿ.ಜಿ. ಸಿದ್ಧಾರ್ಥ ಅವರ ಸಾವಿನ ವಿಷಯ ತಿಳಿದು ಆಘಾತವಾಗಿದೆ.ಸಿದ್ಧಾರ್ಥರವರದ್ದು ತುಂಬಾ ಸರಳ ವ್ಯಕ್ತಿತ್ವ. 35 ವರ್ಷಗಳಿಂದ ಅವರನ್ನು ನಾನು ನೋಡಿದ್ದೇನೆ. ಸಾವಿರಾರು ಜನರ ಸ್ವಾಭಿಮಾನದ ಬದುಕಿಗೆ ದಾರಿಯಾಗಿದ್ದರು. ಅವರ ಈ ದಾರುಣ ಸಾವಿನ ಬಗ್ಗೆ ಸರ್ಕಾರ ಸೂಕ್ತ ತನಿಖೆ ನಡೆಸಲಿ ಎಂದು ಒತ್ತಾಯಿಸಿದ್ದಾರೆ.
ಸಿದ್ದರಾಮಯ್ಯ ಅವರ ಬೆನ್ನಲ್ಲೇ ಇದೀಗ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಕೂಡ ಸಿದ್ಧಾರ್ಥ್ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು, ಅವರ ಸಾವಿನ ಬಗ್ಗೆ ಸೂಕ್ತ ರೀತಿಯಲ್ಲಿ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಅವರು ಉದ್ಯಮಿ ವಿ.ಜಿ.ಸಿದ್ಧಾರ್ಥ ಅವರ ಸಾವು ಎಷ್ಟು ಎಷ್ಟು ದಾರುಣವೋ, ಅದರ ಹಿನ್ನೆಲೆ ಅಷ್ಟೇ ನಿಗೂಢವಾದುದು. ಅವರನ್ನು ಇಂತಹದ್ದೊಂದು ದುರಂತಕ್ಕೆ ತಳ್ಳಿದ ಕಾರಣಗಳು ಮತ್ತು ಅದರ ಹಿಂದಿನ ಕಾಣದ ಕೈಗಳ ಬಗ್ಗೆ ಸಮಗ್ರ ತನಿಖೆಯಾದರೆ ಮಾತ್ರ ಅವರಿಗೆ ನಾವು ನಿಜವಾದ ಶ್ರದ್ಧಾಂಜಲಿ ಸಲ್ಲಿಸಿದಂತಾಗುತ್ತದೆ ಎಂದು ಹೇಳಿ, ತನಿಖೆಗೆ ಆಗ್ರಹಿಸಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…