ಸಿನೆಮಾ ನಟ-ನಟಿಯರು ಬೀದಿಗಿಳಿದು ಹೋರಾಟ ನಿರತ ರೈತರನ್ನು ಬೆಂಬಲಿಸಬೇಕು : ಸಿದ್ದರಾಮಯ್ಯ ಮನವಿ -Vishwanews24
ಸಿನೆಮಾ ನಟ-ನಟಿಯರು ಬೀದಿಗಿಳಿದು ಹೋರಾಟ ನಿರತ ರೈತರನ್ನು ಬೆಂಬಲಿಸಬೇಕು : ಸಿದ್ದರಾಮಯ್ಯ ಮನವಿ -Vishwanews24
ಬೆಂಗಳೂರು: ಈ ಮಣ್ಣಿನ ಎಲ್ಲ ಸಾಹಿತಿಗಳು, ಕಲಾವಿದರು ವಿಶೇಷವಾಗಿ ಸಿನೆಮಾ ನಟ-ನಟಿಯರು ಬೀದಿಗಿಳಿದು ಹೋರಾಟ ನಿರತ ರೈತರನ್ನು ಬೆಂಬಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಈ ಕುರಿತು ಗುರುವಾರ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ದೇಶಾದ್ಯಂತ ರೈತರು ನಡೆಸುತ್ತಿರುವ ಹೋರಾಟ ಕೇವಲ ರೈತ ಸಂಘಟನೆಗಳು ಇಲ್ಲವೇ ರಾಜಕೀಯ ಪಕ್ಷಗಳದ್ದಲ್ಲ ಎಂದು ಉಲ್ಲೇಖಿಸಿದರು.
ದೇಶಾದ್ಯಂತ ರೈತರು ನಡೆಸುತ್ತಿರುವ ಹೋರಾಟ ಕೇವಲ ರೈತ ಸಂಘಟನೆಗಳು ಇಲ್ಲವೇ ರಾಜಕೀಯ ಪಕ್ಷಗಳದ್ದಲ್ಲ.
ಈ ಮಣ್ಣಿನ ಎಲ್ಲ ಸಾಹಿತಿಗಳು,
ಕಲಾವಿದರು
ವಿಶೇಷವಾಗಿ
ಸಿನೆಮಾ ನಟ-ನಟಿಯರು ಬೀದಿಗಿಳಿದು ಹೋರಾಟ ನಿರತ ರೈತರನ್ನು ಬೆಂಬಲಿಸಬೇಕು.ನಾವೆಲ್ಲರೂ ರೈತರು ಬೆಳೆದ ಅನ್ನ ತಿನ್ನುವವರಲ್ಲವೇ?#FarmersProtest
— Siddaramaiah (@siddaramaiah) February 4, 2021
ಕೇಂದ್ರ ಸರ್ಕಾರದ ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ದೆಹಲಿ ಗಡಿ ಪ್ರದೇಶಗಳಲ್ಲಿ ಕಳೆದ 70 ದಿನಗಿಂತಲೂ ಹೆಚ್ಚು ಸಮಯದಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಕಳೆದ ವರ್ಷ ನವೆಂಬರ್ 26ರಂದು ರೈತ ಸಂಘಟನೆಗಳು ಕೇಂದ್ರ ಸರ್ಕಾರದ ವಿರುದ್ಧ ಹೋರಾಟವನ್ನು ಪ್ರಾರಂಭಿಸಿತ್ತು. ಇದಕ್ಕೆ ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್ ಬೆಂಬಲ ಸೂಚಿಸಿದೆ.
ಉಡುಪಿ: ಉದ್ಯಾವರದ ಕಲ್ಸಂಕದಲ್ಲಿ ಏಳನೇ ಶತಮಾನದ ಆಳುಪರ ಕಾಲದ ಶಾಸನ ಪತ್ತೆ -Vishwanews24
