ಇಂದೋರ್: ಇಂದೋರ್ ದೇವಸ್ಥಾನದ ಸ್ಟೆಪ್ ವೆಲ್ (ಮೆಟ್ಟಿಲುಗಳ ಬಾವಿ) ಮೇಲೆ ಹಾಕಲಾಗಿದ್ದ ಸಿಮೆಂಟ್ ಹಾಸು ಕುಸಿದ ಘಟನೆಯಲ್ಲಿ ಸಾವಿನ ಸಂಖ್ಯೆ 35 ಕ್ಕೆ ಏರಿಕೆಯಾಗಿದೆ ಎಂದು ಇಂದೋರ್ ಜಿಲ್ಲಾಧಿಕಾರಿ ಡಾ.ಇಳಯರಾಜ. ಟಿ ತಿಳಿಸಿದ್ದಾರೆ.
ಪಟೇಲ್ ನಗರದಲ್ಲಿರುವ ಈ ದೇವಸ್ಥಾನದಲ್ಲಿ ರಾಮ ನವಮಿ ಪ್ರಯುಕ್ತ ಸಾವಿರಾರು ಮಂದಿ ಭಕ್ತರು ಆಗಮಿಸಿದ್ದರು. ಬಾವಿಯ ಮೇಲೆ ಹಾಸಿದ್ದ ಸಿಮೆಂಟ್ ಹಾಸು ಜನರ ಭಾರ ತಡೆಯಲಾಗದೆ ಕುಸಿದು ಬಿದ್ದಿದೆ. ಇದರಿಂದ ಅದರ ಮೇಲಿದ್ದವರೆಲ್ಲರೂ ಬಾವಿಯೊಳಗೆ ಬಿದ್ದಿದ್ದು, ಅದರಲ್ಲಿ ಒಟ್ಟು 35 ಜನರು ಸಾವನ್ನಪ್ಪಿದ್ದಾರೆ, ಒಬ್ಬರು ಕಾಣೆಯಾಗಿದ್ದಾರೆ ಮತ್ತು 14 ಜನರನ್ನು ರಕ್ಷಿಸಲಾಗಿದೆ.
ಇನ್ನು 18 ಗಂಟೆಗಳ ಸುದೀರ್ಘ ರಕ್ಷಣಾ ಕಾರ್ಯಾಚರಣೆಯು ಗುರುವಾರ ಮಧ್ಯಾಹ್ನ 12:30 ರ ಸುಮಾರಿಗೆ ಪ್ರಾರಂಭವಾಯಿತು ಮತ್ತು ಇನ್ನೂ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮೃತರ ಕುಟುಂಬಕ್ಕೆ 5 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ. ಪರಿಹಾರ ಘೋಷಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…