Featured

ಸಿಮೆಂಟ್ ಹಾಸು ಕುಸಿದು ದೇವಸ್ಥಾನದ ಬಾವಿಯೊಳಗೆ ಬಿದ್ದ ಭಕ್ತರು -ಸಾವಿನ ಸಂಖ್ಯೆ 35 ಕ್ಕೆ ಏರಿಕೆ – Vishwanews24

ಸಿಮೆಂಟ್ ಹಾಸು ಕುಸಿದು ದೇವಸ್ಥಾನದ ಬಾವಿಯೊಳಗೆ ಬಿದ್ದ ಭಕ್ತರು -ಸಾವಿನ ಸಂಖ್ಯೆ 35 ಕ್ಕೆ ಏರಿಕೆ

ಇಂದೋರ್: ಇಂದೋರ್ ದೇವಸ್ಥಾನದ ಸ್ಟೆಪ್ ವೆಲ್ (ಮೆಟ್ಟಿಲುಗಳ ಬಾವಿ) ಮೇಲೆ ಹಾಕಲಾಗಿದ್ದ ಸಿಮೆಂಟ್ ಹಾಸು ಕುಸಿದ ಘಟನೆಯಲ್ಲಿ ಸಾವಿನ ಸಂಖ್ಯೆ 35 ಕ್ಕೆ ಏರಿಕೆಯಾಗಿದೆ ಎಂದು ಇಂದೋರ್ ಜಿಲ್ಲಾಧಿಕಾರಿ ಡಾ.ಇಳಯರಾಜ. ಟಿ ತಿಳಿಸಿದ್ದಾರೆ.

ಪಟೇಲ್‌ ನಗರದಲ್ಲಿರುವ ಈ ದೇವಸ್ಥಾನದಲ್ಲಿ ರಾಮ ನವಮಿ ಪ್ರಯುಕ್ತ ಸಾವಿರಾರು ಮಂದಿ ಭಕ್ತರು ಆಗಮಿಸಿದ್ದರು. ಬಾವಿಯ ಮೇಲೆ ಹಾಸಿದ್ದ ಸಿಮೆಂಟ್ ಹಾಸು ಜನರ ಭಾರ ತಡೆಯಲಾಗದೆ ಕುಸಿದು ಬಿದ್ದಿದೆ. ಇದರಿಂದ ಅದರ ಮೇಲಿದ್ದವರೆಲ್ಲರೂ ಬಾವಿಯೊಳಗೆ ಬಿದ್ದಿದ್ದು, ಅದರಲ್ಲಿ ಒಟ್ಟು 35 ಜನರು ಸಾವನ್ನಪ್ಪಿದ್ದಾರೆ, ಒಬ್ಬರು ಕಾಣೆಯಾಗಿದ್ದಾರೆ ಮತ್ತು 14 ಜನರನ್ನು ರಕ್ಷಿಸಲಾಗಿದೆ.

ಇನ್ನು 18 ಗಂಟೆಗಳ ಸುದೀರ್ಘ ರಕ್ಷಣಾ ಕಾರ್ಯಾಚರಣೆಯು ಗುರುವಾರ ಮಧ್ಯಾಹ್ನ 12:30 ರ ಸುಮಾರಿಗೆ ಪ್ರಾರಂಭವಾಯಿತು ಮತ್ತು ಇನ್ನೂ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮೃತರ ಕುಟುಂಬಕ್ಕೆ 5 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ. ಪರಿಹಾರ ಘೋಷಿಸಿದ್ದಾರೆ.

Vishwa News 24

Recent Posts

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

6 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

6 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

7 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

7 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

7 hours ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

8 hours ago