Featured

ಸಿರಿಯಾದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ: ಭಾರತದ 75 ನಾಗರಿಕರನ್ನು ಸುರಕ್ಷಿತವಾಗಿ ಸ್ಥಳಾಂತರ – vishwanews24

ಸಿರಿಯಾದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ: ಭಾರತದ 75 ನಾಗರಿಕರನ್ನು ಸುರಕ್ಷಿತವಾಗಿ ಸ್ಥಳಾಂತರ

ಸಿರಿಯಾ:ಸಿರಿಯಾದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾಗಿದೆ. ಅಸ್ಸಾದ್ ಸರ್ಕಾರ ಪತನಗೊಂಡಿದೆ, ಅಧ್ಯಕ್ಷ ಬೇರೆ ದೇಶಕ್ಕೆ ಪಲಾಯನ ಮಾಡಿದ್ದಾರೆ. ಬಂಡುಕೋರರು ರಾಜಧಾನಿ ಡಮಾಸ್ಕಸ್​ ಸೇರಿದಂತೆ ಬಹುತೇಕ ಎಲ್ಲಾ ಪ್ರದೇಶಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಹಿನ್ನೆಲೆಯಲ್ಲಿ ಭಾರತವು 75 ಭಾರತೀಯರನ್ನು ಇದೀಗ ಸುರಕ್ಷಿತವಾಗಿ ಲೆಬನಾನ್​ಗೆ ಸ್ಥಳಾಂತರ ಮಾಡಿದ್ದು, ಶೀಘ್ರವೇ ಭಾರತಕ್ಕೆ ಕರೆತರಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸಿರಿಯಾದಿಂದ ಸ್ಥಳಾಂತರಿಸಲ್ಪಟ್ಟವರಲ್ಲಿ ಜಮ್ಮು ಮತ್ತು ಕಾಶ್ಮೀರದ 44 ಯಾತ್ರಾರ್ಥಿಗಳೂ ಸೇರಿದ್ದಾರೆ.
ರಾಜಧಾನಿ ಡಮಾಸ್ಕಸ್‌ನಿಂದ 10 ಕಿಲೋಮೀಟರ್ ದೂರದಲ್ಲಿರುವ ಮತ್ತೊಂದು ಪಟ್ಟಣವಾದ ಸೈದಾ ಜೈನಾಬ್‌ನಲ್ಲಿ ಯಾತ್ರಿಕರು ಸಿಲುಕಿಕೊಂಡಿದ್ದರು. ಸಿರಿಯಾದಲ್ಲಿನ ಪ್ರಸ್ತುತ ಭದ್ರತಾ ಪರಿಸ್ಥಿತಿ ಮತ್ತು ಭಾರತೀಯ ನಾಗರಿಕರ ನಿರಂತರ ವಿನಂತಿ ಬಳಿಕ ಅವರನ್ನು ಸ್ಥಳಾಂತರಿಸುವ ಕಾರ್ಯಕ್ಕೆ ಒಪ್ಪಿಗೆ ನೀಡಲಾಗಿತ್ತು.
ದಂಗೆಯ ನಂತರದ ಸೂಕ್ಷ್ಮ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಭಾರತ ಸರ್ಕಾರವು ಇನ್ನೂ ಸಿರಿಯಾದಲ್ಲಿ ವಾಸಿಸುವ ಭಾರತೀಯ ನಾಗರಿಕರಿಗೆ ಎಚ್ಚರಿಕೆ ವಹಿಸಲು ಸಲಹೆ ನೀಡಿದೆ. ಡಮಾಸ್ಕಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರಲು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಮಾರ್ಗಸೂಚಿಗಳ ಬಗ್ಗೆಯೂ ಗಮನ ಹರಿಸುವಂತೆ ಮನವಿ ಮಾಡಲಾಗಿದೆ.
Vishwa News 24

Recent Posts

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

1 hour ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

2 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

2 hours ago

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

4 hours ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

5 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

18 hours ago