ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು ₹2162ರಿಂದ ₹3153ಕ್ಕೆ ಏರಿಸಿರುವುದು, ಒಟ್ಟು ₹991ರ ಭಾರೀ ಏರಿಕೆ ಕೇಂದ್ರ ಸರ್ಕಾರದ ಜನವಿರೋಧಿ ನಿರ್ಧಾರವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತೀವ್ರವಾಗಿ ಖಂಡಿಸಿದ್ದಾರೆ.
ಈ ಪ್ರಮಾಣದ ಬೆಲೆ ಏರಿಕೆ ಹಿಂದೆ ಎಂದೂ ಕಂಡಿಲ್ಲ. ಕೆಲವು ರಾಜ್ಯಗಳ ಚುನಾವಣೆ ಮುಗಿದ ತಕ್ಷಣ ಇಂತಹ ಜನವಿರೋಧಿ ನಿರ್ಧಾರ ತೆಗೆದುಕೊಂಡಿರುವುದು ಜನರಿಗೆ ನೀಡಿದ ಭರವಸೆಗಳನ್ನೇ ಮರೆತಂತಾಗಿದೆ. ಇದು ನೇರವಾಗಿ ಹೊಟೇಲ್ ಉದ್ಯಮದ ಮೇಲೆ ಹಾಗೂ ಸಾಮಾನ್ಯ ಜನರ ಬದುಕಿನ ಮೇಲೆ ಗದಾಪ್ರಹಾರವಾಗಿದೆ ಎಂದಿದ್ದಾರೆ.
ಇದನ್ನೂ ಓದಿ:
ಹೋಟೆಲ್ ಮಾಲೀಕರು ಈಗಾಗಲೇ ಬೆಲೆ ಏರಿಕೆಯ ಒತ್ತಡವನ್ನು ಎದುರಿಸುತ್ತಿದ್ದಾರೆ. ಈ ನಿರ್ಧಾರದಿಂದ ಆಹಾರ ಪದಾರ್ಥಗಳ ಬೆಲೆ ಮತ್ತಷ್ಟು ಏರಿಕೆಯಾಗಲಿದೆ. ಅದರ ಪರಿಣಾಮವಾಗಿ ದಿನನಿತ್ಯ ಜೀವನ ನಡೆಸುವ ಸಾಮಾನ್ಯ ಜನರು ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಹೇಳಿದ್ದಾರೆ.
ಕೇಂದ್ರ ಸರ್ಕಾರ ಜನರ ಜೀವನೋಪಾಯವನ್ನು ಕಷ್ಟಕರಗೊಳಿಸುವ ಬದಲು, ಬೆಲೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ಆದರೆ, ಚುನಾವಣೆಯ ಬಳಿಕ ಜನರಿಗೆ ಮತ್ತೊಮ್ಮೆ ಮೋಸ ಮಾಡುತ್ತಿರುವುದು ಸ್ಪಷ್ಟವಾಗಿದೆ.
ಇದನ್ನೂ ಓದಿ:
ತಕ್ಷಣವೇ ಈ ಅನ್ಯಾಯಕರ ಬೆಲೆ ಏರಿಕೆಯನ್ನು ಹಿಂಪಡೆಯಬೇಕು ಹಾಗೂ ಜನಪರ ನೀತಿಗಳನ್ನು ಅನುಸರಿಸಬೇಕು ಎಂದು ಲಕ್ಷ್ಮೀ ಹೆಬ್ಬಾಳಕರ್ ಒತ್ತಾಯಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…