Featured

ಸಿಸ್ಟರ್‌ ಅಭಯಾ ಹತ್ಯೆ ಪ್ರಕರಣ : ಆರೋಪಿಗಳಾದ ಪಾದ್ರಿ ಥಾಮಸ್‌ ಕೊಟ್ಟೂರ್‌ ಹಾಗೂ ಸಿಸ್ಟರ್‌‌ ಸೆಫಿಗೆ ಜೀವಾವಧಿ ಶಿಕ್ಷೆ -Vishwanews24

ಸಿಸ್ಟರ್‌ ಅಭಯಾ ಹತ್ಯೆ ಪ್ರಕರಣ : ಆರೋಪಿಗಳಾದ ಪಾದ್ರಿ ಥಾಮಸ್‌ ಕೊಟ್ಟೂರ್‌ ಹಾಗೂ ಸಿಸ್ಟರ್‌‌ ಸೆಫಿಗೆ ಜೀವಾವಧಿ ಶಿಕ್ಷೆ -Vishwanews24

ತಿರುವನಂತಪುರಂ,: ಕೇರಳದ 21 ವರ್ಷದ ಸಿಸ್ಟರ್‌‌ ಅಭಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಪಾದ್ರಿ ಥಾಮಸ್‌ ಕೊಟ್ಟೂರ್‌ ಹಾಗೂ ಸಿಸ್ಟರ್‌‌ ಸೆಫಿಗೆ ಸಿಬಿಐ ವಿಶೇಷ ನ್ಯಾಯಾಲಯ ಡಿ.23ರ ಬುಧವಾರದಂದು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿ.22ರ ಮಂಗಳವಾರದಂದು ಇಬ್ಬರನ್ನೂ ಕೂಡಾ ಸಿಬಿಐ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿತ್ತು. ಶಿಕ್ಷೆಯ ಪ್ರಮಾಣವನ್ನು ಡಿ.23ರ ಬುಧವಾರದಂದು ಪ್ರಕಟಿಸುವುದಾಗಿ ಕೋರ್ಟ್ ತಿಳಿಸಿತ್ತು.

ಸಿಸ್ಟರ್‌‌ ಅಭಯಾ ಅವರು, ಕೊಟ್ಟಾಯಂನ ಚರ್ಚ್‌ವೊಂದರಲ್ಲಿ ನಡೆಯುತ್ತಿದ್ದ ಕೆಲ ಅನೈತಿಕ ಚಟುವಟಿಕೆಗಳನ್ನು ಕಣ್ಣಾರೆ ಕಂಡಿದ್ದು, ಈ ಹಿನ್ನೆಲೆ ಆ ವಿಚಾರ ಬಹಿರಂಗವಾಗಬಾರದು ಎನ್ನುವ ನಿಟ್ಟಿನಲ್ಲಿ ಸಿಸ್ಟರ್‌ ಅಭಯಾ ಅವರನ್ನು ಕೊಡಲಿಯ ಹಿಡಿಕೆಯಿಂದ ಹೊಡೆದ ಹತ್ಯೆಗೈದಿದ್ದರು.

1992ರ ಮಾರ್ಚ್ 27ರಂದು ಕೊಟ್ಟಾಯಂ ಪಯಸ್ ಟೆನ್ತ್ ಕಾನ್ವೆಂಟ್‌ನ ಬಾವಿಯಲ್ಲಿ ಸಿಸ್ಟರ್ ಅಭಯಾ ಶವ ಪತ್ತೆಯಾಗಿತ್ತು. ಇದು ಆತ್ಮಹತ್ಯೆ ಪ್ರಕರಣ ಎಂದು ಸ್ಥಳೀಯ ಪೊಲೀಸರು ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದರು.

ಅಂದಿನ ಕೊಟ್ಟಾಯಂ ನಗರಸಭೆ ಚೇರ್ಮನ್ ಪಿಸಿ ಚೆರಿಯನ್ ಮಡುಕ್ಕನಿ ಮತ್ತು ಮಾನವ ಹಕ್ಕುಗಳ ಹೋರಾಟಗಾರ ಜೋಮೋನ್ ಪುತ್ತನ್ ಪುರಕಲ್ ಅವರು ಈ ಪ್ರಕರಣವನ್ನು ಕೋರ್ಟಿಗೆ ಮನವಿ ಮಾಡಿ ಬಳಿಕ ಪ್ರಕರಣದ ತನಿಖೆಯನ್ನು ಕ್ರೈಂ ಬ್ರಾಂಚ್‌ಗೆ ವರ್ಗಾಯಿಸಲಾಗಿತ್ತು. ಆದರೆ ಕ್ರೈಂ ಬ್ರಾಂಚ್‌ ಪೊಲೀಸರು ಕೂಡಾ ಅಭಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಹೇಳಿದ್ದರು.

ಇದಾದ ಬಳಿ ಪೋಷಕರ ವಿರೋಧದ ಪರಿಣಾಮವಾಗಿ 2008ರಲ್ಲಿ ಈ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು. ಇದೀಗ 28 ವರ್ಷಗಳ ನಂತರ ಸಿಸ್ಟರ್‌‌ ಅಭಯಾ ಹತ್ಯೆ ಪ್ರಕರಣಕ್ಕೆ ನ್ಯಾಯ ಸಿಕ್ಕಂತಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 day ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago