ಬೆಂಗಳೂರು : ಕಾನ್ಫಿಡೆಂಟ್ ಗ್ರೂಪ್‌ನ ಸಿಇಓ ಡಾ. ಸಿ.ಜೆ ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವತಃ ಅವರೇ ಗುಂಡು ಹಾರಿಸಿಕೊಂಡಿರುವುದು ಘಟನಾ ಸ್ಥಳವನ್ನು ಕೂಲಂಕುಷ ಮತ್ತು ಮರಣೋತ್ತರ ಪರೀಕ್ಷೆಯಲ್ಲಿ ದೃಢಪಟ್ಟಿದೆ.
ಸಿ.ಜೆ ರಾಯ್ ಅವರು ತಮ್ಮ ಬಲಗೈಯಿಂದ ಎದೆಗೆ ಗುಂಡು ಹಾರಿಸಿಕೊಂಡಿದ್ದಾರೆ. ಗುಂಡು ಎದೆಯ ಎಡಭಾಗದ ಮೂಲಕ ದೇಹವನ್ನು ಪ್ರವೇಶಿಸಿ, ಬೆನ್ನಿನ ಭಾಗದಲ್ಲಿ ಸಿಲುಕಿಕೊಂಡಿದೆ. ಒಂದು ಸುತ್ತು ಗುಂಡು ಹಾರಿಸಿಕೊಂಡು ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಗನ್ ಅನ್ನು ಎದೆಯ ಮೇಲಿಟ್ಟು ಅತ್ಯಂತ ಸಮೀಪದಿಂದ ಗುಂಡು ಹಾರಿಸಿಕೊಂಡಿರುವುದು ಪತ್ತೆಯಾಗಿದೆ. ಈ ಕಾರಣದಿಂದ ಎದೆಯ ಮೇಲ್ಭಾಗದ ಮಾಂಸಖಂಡಗಳು ಚದುರಿಲ್ಲ, ಬದಲಾಗಿ ಗುಂಡು ನೇರವಾಗಿ ದೇಹದೊಳಗೆ ಆಳವಾಗಿ ಇಳಿದಿದೆ. ಈ ವೇಳೆ ಎದೆ ಛಿದ್ರವಾಗಿ ಗುಂಡು ಬೆನ್ನಿನಲ್ಲಿ ಸಿಲುಕಿಕೊಂಡಿರುವುದಾಗಿ ತನಿಖೆಯಲ್ಲಿ ತಿಳಿದುಬಂದಿದೆ.
ಪಾಕೆಟ್ ಗನ್‌ನಿಂದ ಶೂಟ್ ಮಾಡಿಕೊಂಡಿದ್ದು, ಬುಲೆಟ್ ದೇಹದ ಒಳನುಗ್ಗಿದೆ. ಹೃದಯ ಹೊಕ್ಕು, ಶ್ವಾಸಕೋಶ, ರಕ್ತನಾಳಕ್ಕೆ ಹೋಗಿ ಕೊನೆಗೆ 11ನೇ ಪಕ್ಕೆಲುಬಿಗೆ ತಲುಪಿದೆ. ಕೊನೆಗೆ ಅಲ್ಲಿಯೇ ಟರ್ನ್ ಆಗಿ ಎದೆಯಲ್ಲಿ ಸಿಲುಕಿದೆ. ಮರಣೋತ್ತರ ಪರೀಕ್ಷೆಯಲ್ಲಿ ಬುಲೆಟ್‌ನ್ನು ಹೊರತೆಗೆದು, ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದೆ. ಬುಲೆಟ್‌ಗೆ ಯಾವುದೇ ಸ್ಕ್ರ‍್ಯಾಚ್ ಆಗದಂತೆ ಕಾರ್ಬನ್‌ನಲ್ಲಿ ಸುತ್ತಿ ರವಾನಿಸಲಾಗಿದೆ.
ಆತ್ಮಹತ್ಯೆಗೆ ಬಳಸಿದ NP bore 0.25 ಪಿಸ್ತೂಲ್ ಸಿಜೆ ರಾಯ್ ಹೆಸರಿನಲ್ಲಿ ಪರವಾನಗಿ ಪಡೆಯಲಾಗಿತ್ತು ಎಂಬುದು ದೃಢಪಟ್ಟಿದೆ. ಸದ್ಯ ಪಿಸ್ತೂಲ್ ಅನ್ನು ವಶಪಡಿಸಿಕೊಳ್ಳಲಾಗಿದ್ದು, ಹೆಚ್ಚಿನ ವಿಧಿವಿಜ್ಞಾನ ಪರೀಕ್ಷೆ ನಡೆಸಲಾಗುತ್ತಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…