Featured

ಸಿ.ಜೆ ರಾಯ್ ಸ್ವತಃ ತಾವೇ ಶೂಟ್ ಮಾಡಿಕೊಂಡಿರುವುದು ಮರಣೋತ್ತರ ಪರೀಕ್ಷೆಯಲ್ಲಿ ದೃಢ – vishwanews24

ಸಿ.ಜೆ ರಾಯ್ ಸ್ವತಃ ತಾವೇ ಶೂಟ್ ಮಾಡಿಕೊಂಡಿರುವುದು ಮರಣೋತ್ತರ ಪರೀಕ್ಷೆಯಲ್ಲಿ ದೃಢ

ಬೆಂಗಳೂರು : ಕಾನ್ಫಿಡೆಂಟ್ ಗ್ರೂಪ್‌ನ ಸಿಇಓ ಡಾ. ಸಿ.ಜೆ ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವತಃ ಅವರೇ ಗುಂಡು ಹಾರಿಸಿಕೊಂಡಿರುವುದು ಘಟನಾ ಸ್ಥಳವನ್ನು ಕೂಲಂಕುಷ ಮತ್ತು ಮರಣೋತ್ತರ ಪರೀಕ್ಷೆಯಲ್ಲಿ ದೃಢಪಟ್ಟಿದೆ.

ಸಿ.ಜೆ ರಾಯ್ ಅವರು ತಮ್ಮ ಬಲಗೈಯಿಂದ ಎದೆಗೆ ಗುಂಡು ಹಾರಿಸಿಕೊಂಡಿದ್ದಾರೆ. ಗುಂಡು ಎದೆಯ ಎಡಭಾಗದ ಮೂಲಕ ದೇಹವನ್ನು ಪ್ರವೇಶಿಸಿ, ಬೆನ್ನಿನ ಭಾಗದಲ್ಲಿ ಸಿಲುಕಿಕೊಂಡಿದೆ. ಒಂದು ಸುತ್ತು ಗುಂಡು ಹಾರಿಸಿಕೊಂಡು ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಗನ್ ಅನ್ನು ಎದೆಯ ಮೇಲಿಟ್ಟು ಅತ್ಯಂತ ಸಮೀಪದಿಂದ ಗುಂಡು ಹಾರಿಸಿಕೊಂಡಿರುವುದು ಪತ್ತೆಯಾಗಿದೆ. ಈ ಕಾರಣದಿಂದ ಎದೆಯ ಮೇಲ್ಭಾಗದ ಮಾಂಸಖಂಡಗಳು ಚದುರಿಲ್ಲ, ಬದಲಾಗಿ ಗುಂಡು ನೇರವಾಗಿ ದೇಹದೊಳಗೆ ಆಳವಾಗಿ ಇಳಿದಿದೆ. ಈ ವೇಳೆ ಎದೆ ಛಿದ್ರವಾಗಿ ಗುಂಡು ಬೆನ್ನಿನಲ್ಲಿ ಸಿಲುಕಿಕೊಂಡಿರುವುದಾಗಿ ತನಿಖೆಯಲ್ಲಿ ತಿಳಿದುಬಂದಿದೆ.

ಪಾಕೆಟ್ ಗನ್‌ನಿಂದ ಶೂಟ್ ಮಾಡಿಕೊಂಡಿದ್ದು, ಬುಲೆಟ್ ದೇಹದ ಒಳನುಗ್ಗಿದೆ. ಹೃದಯ ಹೊಕ್ಕು, ಶ್ವಾಸಕೋಶ, ರಕ್ತನಾಳಕ್ಕೆ ಹೋಗಿ ಕೊನೆಗೆ 11ನೇ ಪಕ್ಕೆಲುಬಿಗೆ ತಲುಪಿದೆ. ಕೊನೆಗೆ ಅಲ್ಲಿಯೇ ಟರ್ನ್ ಆಗಿ ಎದೆಯಲ್ಲಿ ಸಿಲುಕಿದೆ. ಮರಣೋತ್ತರ ಪರೀಕ್ಷೆಯಲ್ಲಿ ಬುಲೆಟ್‌ನ್ನು ಹೊರತೆಗೆದು, ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದೆ. ಬುಲೆಟ್‌ಗೆ ಯಾವುದೇ ಸ್ಕ್ರ‍್ಯಾಚ್ ಆಗದಂತೆ ಕಾರ್ಬನ್‌ನಲ್ಲಿ ಸುತ್ತಿ ರವಾನಿಸಲಾಗಿದೆ.

ಆತ್ಮಹತ್ಯೆಗೆ ಬಳಸಿದ NP bore 0.25 ಪಿಸ್ತೂಲ್ ಸಿಜೆ ರಾಯ್ ಹೆಸರಿನಲ್ಲಿ ಪರವಾನಗಿ ಪಡೆಯಲಾಗಿತ್ತು ಎಂಬುದು ದೃಢಪಟ್ಟಿದೆ. ಸದ್ಯ ಪಿಸ್ತೂಲ್ ಅನ್ನು ವಶಪಡಿಸಿಕೊಳ್ಳಲಾಗಿದ್ದು, ಹೆಚ್ಚಿನ ವಿಧಿವಿಜ್ಞಾನ ಪರೀಕ್ಷೆ ನಡೆಸಲಾಗುತ್ತಿದೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

10 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

10 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

11 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

14 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

14 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

14 hours ago