Featured

ಸಿ.ಟಿ ರವಿಗೆ ಶಿಕ್ಷೆ ಆಗುವವರೆಗೂ ಬಿಡುವುದಿಲ್ಲ : ಲಕ್ಷ್ಮಿ ಹೆಬ್ಬಾಳ್ಕರ್‌ – vishwanews24

ಸಿ.ಟಿ ರವಿ ಆ ಪದ ಬಳಸಿದ್ದಾರೆ ಎನ್ನಲಾದ ವೀಡಿಯೋ ಬಿಡುಗಡೆ ಮಾಡಿದ ಲಕ್ಷ್ಮಿ ಹೆಬ್ಬಾಳ್ಕರ್‌ ..

ಸಿ.ಟಿ ರವಿ ಕ್ಷಮಿಸುವ ಪ್ರಮೇಯ ಇಲ್ಲ, ಈ ಲಕ್ಷ್ಮಿ ಹೆಬ್ಬಾಳ್ಕರ್‌ ಯಾವತ್ತಿಗೂ ಕ್ಷಮಿಸಲ್ಲ..

ಬೆಳಗಾವಿ : ವಿಧಾನ ಪರಿಷತ್ ಕಲಾಪದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಶಬ್ದಗಳಿಂದ ಬಿಜೆಪಿ ನಾಯಕ ಸಿ.ಟಿ ರವಿ ನಿಂದಿಸಿದ ಆರೋಪ ವ್ಯಾಪಕವಾಗಿ ಸದ್ದು ಮಾಡುತ್ತಿದೆ. ಇದರ ಬೆನ್ನಲ್ಲೇ ಸಿ.ಟಿ ರವಿ ಪದ ಬಳಸಿದ್ದಾರೆ ಎನ್ನಲಾದ ವೀಡಿಯೋವೊಂದನ್ನ ಲಕ್ಷ್ಮಿ ಹೆಬ್ಬಾಳ್ಕರ್‌ ಬಿಡುಗಡೆ ಮಾಡಿದ್ದಾರೆ.

ಪರಿಷತ್‌ ಕಲಾಪದ ವೇಳೆ ಸಿ.ಟಿ ರವಿ ಆ ಪದ ಬಳಸಿ ನಿಂದಿಸಿದ್ದಾರೆ ಎನ್ನಲಾದ ವೀಡಿಯೋವನ್ನ ಪ್ರಸಾರ ಮಾಡಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಯಾವುದೇ ಕಾರಣಕ್ಕೂ ಸಿ.ಟಿ ರವಿ ಕ್ಷಮಿಸುವ ಪ್ರಮೇಯ ಇಲ್ಲ, ಈ ಲಕ್ಷ್ಮಿ ಹೆಬ್ಬಾಳ್ಕರ್‌ ಯಾವತ್ತಿಗೂ ಕ್ಷಮಿಸಲ್ಲ. ಅವರಿಗೆ ಶಿಕ್ಷೆ ಆಗುವವರೆಗೂ ಬಿಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಸಿಎಂ ಮತ್ತು ಸಭಾಪತಿ ಅವರು ತನಿಖೆ ಮಾಡಬೇಕು. ಆದಷ್ಟು ಬೇಗೆ ಎಫ್‌ಎಸ್‌ಎಲ್ ರಿಪೋರ್ಟ್ ತರಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.ಸಿಟಿ ರವಿಯವರೇ ನನಗೆ ಆ ಪದ ಬಳಸಿದೀರಿ, ಇಂತಹ ನೂರು ಸಿ.ಟಿ ರವಿ ಬಂದ್ರೂ ನಾನು ಎದುರಿಸುತ್ತೇನೆ. ನನ್ನ ಬಳಿ ದಾಖಲೆ ಇವೆ, ಇಂದೇ ಬಿಡುಗಡೆ ಮಾಡುತ್ತೇನೆ ಎಂದರು.

ನಿಮ್ಮ ಮನೆಯಲ್ಲಿ ಹೆಣ್ಣು ಮಕ್ಕಳಿಲ್ವಾ, ದೇವರ ಹತ್ರ ಹೋಗಿ ನಿಂತ್ಕೊಳ್ತಿರಿ, ಒಬ್ಬ ಹೆಣ್ಮಗಳಿಗೆ ಈ ರೀತಿ ಮಾತನಾಡಿ, ರಾಜಾರೋಷವಾಗಿ ಓಡಾಡ್ತಿದ್ದೀರಿ ನಿಮಗೆ ನಾಚಿಗೆ ಆಗಬೇಕು. ಇದನ್ನು ಸುಮ್ಮನೆ ಬಿಡಲ್ಲ, ಕಾನೂನು ಹೋರಾಟ ಮಾಡುತ್ತೇನೆ ಎಂದಿದ್ದಾರೆ.

ಪ್ರಧಾನಿ ಮೋದಿ, ರಾಷ್ಟ್ರಪತಿಗೆ ಪತ್ರ ಬರೆಯುತ್ತೇನೆ. ಅವಕಾಶ ಸಿಕ್ಕರೆ ಪ್ರಧಾನಿ ಮೋದಿಯವರನ್ನ ಭೇಟಿ ಆಗಿ ವಿಷಯ ತಿಳಿಸುತ್ತೇನೆ. ರಾಜಕಾರಣದಲ್ಲಿ ಹಿಂದಕ್ಕೆ ಸರಿಸಬೇಕು ಅಂತಾ ಮಾಡಿದ್ದಾರೆ. ನಾವು ಇದರಿಂದ ಮನೆಯಲ್ಲಿ ಕುಳಿತುಕೊಳ್ತೇವಿ ನೊಂದುಕೊಳ್ತೇವಿ ಅಂತ ಅಂದುಕೊಂಡಿದ್ರೆ ಈಗಲೇ ಬಿಟ್ಟುಬಿಡಿ ಎಂದು ತಿರುಗೇಟು ನೀಡಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago