Featured

ಸಿ.ಟಿ ರವಿ ಪರವಾಗಿ ನಿಂತು ಎಲ್ಲರೂ ಧೃತರಾಷ್ಟ್ರ ಆದ್ರು : ಲಕ್ಷ್ಮಿ ಹೆಬ್ಬಾಳ್ಕರ್‌ ಕಣ್ಣೀರು – vishwanews24

ಸಿ.ಟಿ ರವಿ ಅವರು ಹೇಳಿದ ಪದ ಹೇಳೋದಕ್ಕೂ ಅಸಹ್ಯ ಆಗುತ್ತೆ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌

ಬೆಳಗಾವಿ/ಬೆಂಗಳೂರು: ರಾಜಕಾರಣದಲ್ಲಿ ರೋಷಾವೇಶವಾಗಿ ಮಾತನಾಡಬಹುದು, ಆದ್ರೆ ಸಿ.ಟಿ ರವಿ ಹೇಳಿದ ಪದ ಹೇಳೋದಕ್ಕೂ ಅಸಹ್ಯವಾಗುತ್ತೆ. ಅವರ ಪರವಾಗಿ ನಿಂತು ಎಲ್ಲರೂ ಧೃತರಾಷ್ಟ್ರರಾದ್ರು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌  ಕಣ್ಣೀರಿಟ್ಟಿದ್ದಾರೆ.

ಸುವರ್ಣಸೌಧದ ಪರಿಷತ್‌ ಕಲಾಪದಲ್ಲಿ ಸಿ.ಟಿ ರವಿ  ನಿಂದನೆ ಆರೋಪ ಪ್ರಕರಣದ ಕುರಿತು ಬೆಳಗಾವಿಯಲ್ಲಿಂದು ಸಚಿವೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ.

ನಿನ್ನೆ ಸದನದಲ್ಲಿ ಅಂಬೇಡ್ಕರ್ ಅವರ ಬಗ್ಗೆ ಅವಹೇಳನ ಖಂಡಿಸಿ ಧರಣಿ ಮಾಡುತ್ತಿದ್ದೆವು. ಧರಣಿ ಮಾಡಿ ನಾವೆಲ್ಲ ಕೂತಿದ್ದೆವು ಸಭಾಪತಿಗಳು ಅಡ್ಜರ್ನ್ ಮಾಡಿದ್ದರು. ನಾನು ನನ್ನ ಸೀಟಲ್ಲಿ ಕೂತಿದ್ದೆ ನಮ್ಮ ನಾಯಕ ರಾಹುಲ್ ಗಾಂಧಿಗ ಡ್ರಗ್ ಅಡಿಕ್ಟ್ ಅಂತ 3-4 ಬಾರಿ ಹೇಳಿದರು, ನಾನು ಸುಮ್ಮನೆ ಕುಳಿತಾಗ ಮತ್ತೆ ಹೇಳಿದರು. ಇದರಿಂದ ಸಿಟ್ಟಾಗಿ ನಾವು ಅವರ ಅಪಘಾತ ಪ್ರಕರಣ ಪ್ರಸ್ತಾಪಿಸಿದೆ. ಅದಕ್ಕೆ ಆ ಪದ ಉಪಯೋಗಿಸಿದ್ದಾರೆ. ಒಮ್ಮೆ ಅಲ್ಲ ಹತ್ತು ಬಾರಿ ಹೇಳಿದ್ದಾರೆ ಎಂದು ಕಣ್ಣೀರಿಟ್ಟಿದ್ದಾರೆ.

ನಾನು ಒಬ್ಬ ತಾಯಿ ಇದ್ದೀನಿ, ಅಕ್ಕ ಇದ್ದೀನಿ. ರಾಜಕಾರಣದಲ್ಲಿ ರೋಷಾವೇಶವಾಗಿ ಮಾತನಾಡಬಹುದು, ನಾನು ಯಾರಿಗೂ ಕಾಟ ಕೊಟ್ಟಿಲ್ಲ. ಆದ್ರೆ ಸಿ.ಟಿ ರವಿ ಅವರು ಹೇಳಿದ ಪದ ಹೇಳೋದಕ್ಕೂ ಅಸಹ್ಯ ಆಗುತ್ತೆ. ಅವರ ಪರವಾಗಿ ನಿಂತು ಎಲ್ಲರೂ ಧೃತರಾಷ್ಟ್ರ ಆದ್ರು. ಡ್ರಗ್ ಅಡಿಕ್ಟ್ ಅಂದಿದ್ದಕ್ಕೆ ನೀವು ಆಕ್ಸಿಡೆಂಟ್ ಮಾಡಿ ಮೂವರ ಕೊಲೆಗಾರ ಎಂದಿದ್ದೆ. ಅದಕ್ಕೆ ಆ ರೀತಿ ಮಾತನಾಡಿದ್ದಾರೆ. ಸದನದಲ್ಲಿ ನ್ಯಾಯ ಸಿಗದ ಬಗ್ಗೆ ನಾನು ಏನೂ ಹೇಳಲ್ಲ. ನನ್ನ ಸೊಸೆ ನನ್ನ ಮಗ ನನಗೆ ಧೈರ್ಯ ತುಂಬಿದ್ದರೆಂದು ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago