Featured

ಸೀಟು ಹಂಚಿಕೆ : ‘ನಾವೇನು ಭಿಕ್ಷುಕರಲ್ಲ’ ಕಾಂಗ್ರೆಸ್​ ವಿರುದ್ಧ ಕುಮಾರಸ್ವಾಮಿ ..Vishwanews24

ಮೈಸೂರು : ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಜೆಡಿಎಸ್​ ಮತ್ತು ಕಾಂಗ್ರೆಸ್​ ನಾಯಕರ ನಡುವೆ ಆಂತರಿಕ ಕಿತ್ತಾಟಗಳು ನಡೆಯುತ್ತಲೇ ಇವೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಎರಡು ಪಕ್ಷಗಳ ನಡುವೆ ಸೀಟು ಹಂಚಿಕೆ ಬಗ್ಗೆ ಭಿನ್ನಾಭಿಪ್ರಾಯಗಳು ಹುಟ್ಟಿಕೊಂಡಿವೆ.

ಸೀಟು ಹಂಚಿಕೆ ವಿಚಾರವಾಗಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್​​ ನಾಯಕರಿಗೆ ತಿರುಗೇಟು ಕೊಟ್ಟಿದ್ದಾರೆ. ನಾವು ಭಿಕ್ಷುಕರಲ್ಲ, ಕಾಂಗ್ರೆಸ್​ನವರು ನಮಗೆ ಏಳೋ, ಐದೋ, ಮೂರೋ ಸೀಟು ಬಿಟ್ಟುಕೊಡುತ್ತಾರೋ ಗೊತ್ತಿಲ್ಲ. ಆದರೆ ನಾವು ಭಿಕ್ಷುಕರಲ್ಲ ಎಂದು ಗರಂ ಆಗಿದ್ದಾರೆ.

ಮೈಸೂರಿನ ಪಾರಂಪರಿಕ ದೇವರಾಜ ಮಾರುಕಟ್ಟೆ ವೀಕ್ಷಣೆ ಬಳಿಕ ಮಾತನಾಡಿದ ಅವರು, ರಾಷ್ಟ್ರಕ್ಕೆ ಒಂದು ಸಂದೇಶ ರವಾನೆಯಾಗಬೇಕಾದರೆ, ಎಲ್ಲರೂ ಕೂತು ಸೀಟು ಹಂಚಿಕೆ ಬಗ್ಗೆ ಚರ್ಚೆ ಮಾಡಬೇಕು. ನಾನು ಆಡಳಿತದ ಕಡೆಗೆ ಗಮನ ಹರಿಸಿದ್ದೇನೆ. ನಮ್ಮ ರಾಷ್ಟ್ರಾಧ್ಯಕ್ಷರು ಕಾಂಗ್ರೆಸ್ ನಾಯಕರ ಜೊತೆ ಕೂತು ಮಾತನಾಡಿ ಸೀಟು ಹಂಚಿಕೆ ಮಾಡಿಕೊಳ್ಳುತ್ತಾರೆ. ನಾನು ಈ ಸೀಟು ಹಂಚಿಕೆ ಬಗ್ಗೆ ಯೋಚನೆ ಮಾಡಿಲ್ಲ ಎಂದರು.

 

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

2 days ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

3 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

3 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

3 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

3 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

3 days ago