(ನ್ಯೂಸ್ ಕಡಬ) newskadaba.com ಹಾಸನ, ಮಾ.18. ಸೀಮೆ ಎಣ್ಣೆ ಸಾಗಿಸುತ್ತಿದ್ದ ಟ್ಯಾಂಕರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದುದರಿಂದ ರಸ್ತೆಯಲ್ಲಿ ಚೆಲ್ಲುತ್ತಿದ್ಧ ಸೀಮೆಎಣ್ಣೆಯನ್ನು ತುಂಬಿಸಿಕೊಳ್ಳಲು ಸಾರ್ವಜನಿಕರು ಹರಸಾಹಸಪಟ್ಟ ಘಟನೆ ಶನಿವಾರದಂದು ಹಾಸನದ ಅರಕಲಗೂಡು ಎಂಬಲ್ಲಿ ನಡೆದಿದೆ.
ಪಡಿತರ ಅಂಗಡಿಗಳಿಗೆ ಸೀಮೆಎಣ್ಣೆ ಪೂರೈಸಲು ತೆರಳುತ್ತಿದ್ದ ಟ್ಯಾಂಕರ್ ಅರಕಲಗೂಡಿನ ಯಗಟಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಈ ಸಂದರ್ಭದಲ್ಲಿ ಟ್ಯಾಂಕರ್ ನಿಂದ ಹೊರ ಬರುತ್ತಿದ್ದ ಸೀಮೆಎಣ್ಣೆಯನ್ನು ಪಡೆಯಲು ಜನರು ಪಾತ್ರೆ, ಜಗ್ಗು, ಕ್ಯಾನ್, ಚೊಬ್ಬುಗಳಲ್ಲಿ ತುಂಬಿಕೊಂಡು ಬರುತ್ತಿದ್ದ ದೃಶ್ಯ ಕಂಡುಬಂದಿದೆ. ಘಟನೆಯಲ್ಲಿ ಯಾವುದೇ ರೀತಿಯ ಪ್ರಾಣಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಅರಕಲಗೂಡು ಠಾಣಾ ಪೋಲಿಸರು ಭೇಟಿ ನೀಡಿ ಸ್ಥಳದಲ್ಲಿದ್ದ ಜನರನ್ನು ಚದುರಿಸಲು ಹರಸಾಹಸಪಟ್ಟರು ಎನ್ನಲಾಗಿದೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…