ಬೆಂಗಳೂರು: ಇಂಧನ ಸಚಿವ ವಿ. ಸುನಿಲ್ ಕುಮಾರ್ ನೇತೃತ್ವದಲ್ಲಿ ಬಿಲ್ಲವ ಸಮುದಾಯದ ಮುಖಂಡರ ನಿಯೋಗ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ನಾರಾಯಣ ಗುರು ನಿಗಮ ಸ್ಥಾಪನೆಗೆ ಕ್ರಮ ತೆಗದು ಕೊಳ್ಳುವಂತೆ ಮನವಿ ಸಲ್ಲಿಸಿದೆ.
ಬಿಲ್ಲವ ಸಮಾಜ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿದ್ದು, ರಾಜ್ಯದ ಇನ್ನುಳಿದ ಜಿಲ್ಲೆಗಳಲ್ಲೂ ಸಂಖ್ಯಾ ಬಾಹುಳ್ಯವನ್ನು ಹೊಂದಿದ್ದು, ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿರುವ ಈ ಸಮಾಜದ ಅಭಿವೃದ್ಧಿ ಹಾಗೂ ನಾರಾಯಣ ಗುರು ತತ್ವ ಆದರ್ಶಗಳ ಪ್ರಚಾರ ದೃಷ್ಟಿಯಿಂದ ನಿಗಮ ಸ್ಥಾಪನೆ ಅಗತ್ಯ ಎಂದು ಮನವಿ ಮಾಡಲಾಗಿದೆ.
ಇನ್ನು ಬಿಲ್ಲವ, ಈಡಿಗ, ನಾಮಧಾರಿ ಎಂಬಿತ್ಯಾದಿ ಉಪನಾಮಗಳನ್ನು ಹೊಂದಿರುವ ಸಮಾಜದ ಎಲ್ಲ ವರ್ಗವನ್ನು ಒಂದೇ ವೇದಿಕೆಯ ಅಡಿಗೆ ತಂದು ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಸಹಕರಿಸಬೇಕೆಂದು ಸಮಾಜದ ನಿಯೋಗ ಮನವಿ ಮಾಡಿದೆ.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕರಾದ ರಘುಪತಿ ಭಟ್, ಹರತಾಳು ಹಾಲಪ್ಪ ಹಾಗೂ ಬಿಲ್ಲವ ಸಮುದಾಯದ ಸ್ವಾಮೀಜಿಗಳು ಮತ್ತು ಮುಖಂಡರು ಉಪಸ್ಥಿತರಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…