Featured

ಸುಪ್ರಸಿದ್ಧ ಪ್ರವಾಸಿ ತಾಣ ಎತ್ತಿನಭುಜಕ್ಕೆ ಪ್ರವಾಸಿಗರಿಗೆ ನಿರ್ಬಂಧ : ಅರಣ್ಯ ಇಲಾಖೆ ಆದೇಶ – vishwanews24

ಸುಪ್ರಸಿದ್ಧ ಪ್ರವಾಸಿ ತಾಣ ಎತ್ತಿನಭುಜಕ್ಕೆ ಪ್ರವಾಸಿಗರಿಗೆ ನಿರ್ಬಂಧ : ಅರಣ್ಯ ಇಲಾಖೆ ಆದೇಶ

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಸುಪ್ರಸಿದ್ಧ ಪ್ರವಾಸಿ ತಾಣ ಎತ್ತಿನ ಭುಜಕ್ಕೆ ಪ್ರವಾಸಿಗರು ತೆರಳದಂತೆ ಅರಣ್ಯ ಇಲಾಖೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದೆ.

ಈಗಾಗಲೇ ಮಳೆಗಾಲ ಆರಂಭವಾಗಿದ್ದು, ಭಾರೀ ಗಾಳಿ, ಮಳೆ ಮಂಜು ಹಾಗೂ ಜಾರಿಕೆಯ ನಡುವೆಯೂ ಎತ್ತಿನ ಭುಜದ ಕಿರಿದಾದ ಪ್ರದೇಶದಲ್ಲಿ ಪ್ರವಾಸಿಗರು ಟ್ರಕ್ಕಿಂಗ್ ಹೋಗುತ್ತಿದ್ದಾರೆ. ಇದರಿಂದ ಏನಾದರೂ ಅನಾಹುತಗಳು ಸಂಭವಿಸಿದರೆ ಎಂಬ ಮುನ್ನೆಚ್ಚರಿಕೆಯಿಂದ ಟ್ರಕ್ಕಿಂಗ್ ಹೋಗುವ ಮರ್ಗದಲ್ಲಿ ಪ್ರವಾಸಿಗರ ಸುರಕ್ಷತಾ ಕಾಮಗಾರಿಗೆ ಇಲಾಖೆ ಮುಂದಾಗಿದೆ. ಕಾಮಗಾರಿ ಅನುಷ್ಠಾನಗೊಳ್ಳಲಿರುವ ಕಾರಣ ಎತ್ತಿನ ಭುಜಕ್ಕೆ ಮುಂದಿನ ಆದೇಶದವರೆಗೂ ಅರಣ್ಯ ಇಲಾಖೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿದೆ.

ಜನರ ಸುರಕ್ಷತೆಗಾಗಿ ಕೆಲವು ಪ್ರವಾಸಿ ತಾಣಗಳಿಗೆ ಆನ್ಲೈನ್ ಟಿಕೆಟ್ ಮೂಲಕ ಪ್ರವಾಸಿಗರು ಹೋಗಬೇಕೆಂಬ ನಿಯಮವನ್ನು ಸರ್ಕಾರ ಜಾರಿ ಮಾಡಿದೆ. ಮಾಡಿದೆ. ಆದರೂ ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಜನಜಂಗುಳಿ ಕಂಡು ಸರ್ಕಾರ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮದ ಎಚ್ಚರಿಕೆ ನೀಡಿದೆ. ಇದರಿಂದ ಅರಣ್ಯ ಇಲಾಖೆ ಮುಂಜಾಗೃತ ಕ್ರಮವಾಗಿ ಈ ನಿರ್ಬಂಧ ವಿಧಿಸಿದೆ.

ಮಲೆನಾಡಲ್ಲಿ ಮಳೆಗೆ ಜಿಲ್ಲೆಯ ಪ್ರವಾಸಿ ತಾಣಗಳು ತನ್ನ ನೈಜ ಸೊಬಗನ್ನ ಅನಾವರಣಗೊಳಿಸಿವೆ. ಅದರಂತೆ ಎತ್ತಿನಭುಜ ತಾಣ ಸಹ ಹಚ್ಚ ಹಸುರಿನಿಂದ ಕಂಗೊಳಿಸುತ್ತಿದೆ. ಜೊತೆಗೆ, ಪ್ರವಾಸಿಗರಿಗೆ ಚಾರಣಕ್ಕೆ ಹೋಗಲು ಕೂಡ ಈ ಪ್ರದೇಶ ನೆಚ್ಚಿನದ್ದಾಗಿದೆ. ಕಳೆದ ಶನಿವಾರದಿಂದ ಸೋಮವಾರದವರೆಗೆ ಮೂರು ದಿನದಲ್ಲಿ 20,000ಕ್ಕೂ ಅಧಿಕ ಪ್ರವಾಸಿಗರು ಭೇಟಿ ನೀಡಿದ್ದಾರೆ ಎಂದು ಅಂದಾಜಿಸಲಾಗಿದೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

6 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

6 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

6 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

7 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

7 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

9 hours ago