ಬೆಂಗಳೂರು : ಸರ್ಕಾರವನ್ನು ಉಳಿಸಿಕೊಳ್ಳಲು ಮೈತ್ರಿ ನಾಯಕರು ವಿಪ್ ಅಧಿಕಾರದ ಬಗ್ಗೆ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ, ಆದರೆ, ಸುಪ್ರೀಂಕೋರ್ಟ್ ಈಗಾಗಲೇ ಅತೃಪ್ತರು ಸದನಕ್ಕೆ ಬರಲು ಒತ್ತಾಯಿಸುವಂತಿಲ್ಲ ಎಂದು ಹೇಳುವ ಮೂಲಕ ವಿಪ್ ಪರಮಾಧಿಕಾರಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲದಂತೆ ಮಾಡಿದೆ ಎಂದು ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ರೆಸಾರ್ಟ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ ವೈ, ಸೋಮವಾರ ಮೈತ್ರಿ ಸರ್ಕಾರ ಬೀಳುವುದು ಖಚಿತ, ಸೋಮವಾರ ಸುಪ್ರೀಂಕೋರ್ಟ್ ಮೈತ್ರಿ ಸರ್ಕಾರದ ಪರವಾಗಿ ತೀರ್ಪು ನೀಡಲಿದೆ ಎಂಬುದು ಭ್ರಮೆಯಷ್ಟೇ ಎಂದು ಅಭಿಪ್ರಾಯಪಟ್ಟಿದ್ದಾರೆ. ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕು ನಿಮಗಿಲ್ಲ. ನೈತಿಕತೆ ಇದ್ದರೆ ಅಧಿಕಾರದಿಂದ ಇಳಿದು ಬಿಟ್ಟುಹೋಗಿ. ರಾಜ್ಯಪಾಲರ ಸೂಚನೆಗಳಿಗೆ ಕ್ಯಾರೇ ಅನ್ನುತ್ತಿಲ್ಲ. ರಾಜ್ಯದಲ್ಲಿ ಬರ ಪರಿಸ್ಥಿತಿ ಇದೆ. ಅದಕ್ಕೂ ಆದ್ಯತೆ ನೀಡುತ್ತಿಲ್ಲ ಎಂದು ದೂರಿದರು.
ಮುಂಬೈನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್ ಶಾಸಕ ಶ್ರೀಮಂತ ಪಾಟೀಲ್ ಅವರೇ ಯಾರೂ ನನ್ನನ್ನು ಕರೆದುಕೊಂಡು ಬಂದಿಲ್ಲ ಎಂದು ತಿಳಿಸಿದ್ದಾರೆ. ಆದರೆ, ಡಿ.ಕೆ.ಶಿವಕುಮಾರ್ ಸಭೆಯಲ್ಲಿ ಅವರ ಫೋಟೋ ಹಿಡಿದು ಗದ್ದಲವನ್ನೇ ಮಾಡಿದ್ದಾರೆ. ಹೀಗಾಗಿ ಸದನಕ್ಕೆ ತಪ್ಪು ಮಾಹಿತಿ ಕೊಟ್ಟ ಕಾರಣ ಡಿ.ಕೆ.ಶಿವಕುಮಾರ್ ಸದನದ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…