Featured

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ

ಬೆಂಗಳೂರು: ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯನ್ನು ಬಿಡುಗಡೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಜೈಲು ಡಿಐಜಿ ಸೋಮಶೇಖರ್  ಅವರನ್ನ ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ.

ಪರಪ್ಪನ ಅಗ್ರಹಾರ ಪೊಲೀಸರು ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದು, ಅಂದಿನ ಜೈಲು ಚೀಫ್ ಸೂಪರಿಂಟೆಂಡೆಂಟ್ ಆಗಿದ್ದ ಹಾಗೂ ಸದ್ಯ ಡಿಐಜಿ ಹುದ್ದೆಯಲ್ಲಿರುವ ಸೋಮಶೇಖರ್ ಅವರ ಪಾತ್ರದ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ.

2018 ರಲ್ಲಿ ನಕಲಿ ಆದೇಶ ಸೃಷ್ಟಿಸಿ ಕೈದಿ ಬಿಡುಗಡೆ
2018ರಲ್ಲಿ ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಶಂಕರ್ ಎಂಬ ಕೈದಿಯನ್ನ ಸುಪ್ರೀಂ ಕೋರ್ಟ್‌ನ ನಕಲಿ ಆದೇಶದ ಆಧಾರದ ಮೇಲೆ ಬಿಡುಗಡೆ ಮಾಡಲಾಗಿತ್ತು. ಶಂಕರ್ ಬಿಡುಗಡೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನ ನಕಲಿ ಆದೇಶವನ್ನು ಸೃಷ್ಟಿಸಲಾಗಿದೆ ಎಂದು ಆರೋಪಿಸಲಾಗಿದ್ದು, ಈ ನಕಲಿ ದಾಖಲೆಯನ್ನ ಜೈಲಿನ ಎಸ್‌ಡಿಎ ಆಗಿದ್ದ ಶ್ರೀಕಾಂತ್ ಎಸ್. ಎಂಬಾತ ಸೃಷ್ಟಿಸಿದ್ದಾನೆ ಎಂಬ ಆರೋಪವಿದೆ.

ನಕಲಿ ಆದೇಶದ ಆಧಾರದ ಮೇಲೆ 2018ರ ನವೆಂಬರ್ 13ರಂದು ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಶಂಕರ್‌ನನ್ನ ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು ಎಂದು ತನಿಖೆಯಿಂದ ತಿಳಿದುಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕೈದಿ ಶಂಕರ್ ಹಾಗೂ ನಕಲಿ ಆದೇಶ ಸೃಷ್ಟಿಸಿದ ಆರೋಪ ಎದುರಿಸುತ್ತಿರುವ ಶ್ರೀಕಾಂತ್ ಎಸ್. ಇಬ್ಬರನ್ನೂ ಈಗಾಗಲೇ ಬಂಧನ ಮಾಡಲಾಗಿದೆ. ಇದೀಗ ಪ್ರಕರಣದಲ್ಲಿ ಅಂದಿನ ಜೈಲು ಚೀಫ್ ಸೂಪರಿಂಟೆಂಡೆಂಟ್ ಆಗಿದ್ದ ಸೋಮಶೇಖರ್ ಅವರ ಪಾತ್ರದ ಕುರಿತು ತನಿಖೆ ನಡೆಸಲಾಗುತ್ತಿದೆ. ಈ ಹಿನ್ನೆಲೆ ಪರಪ್ಪನ ಅಗ್ರಹಾರ ಪೊಲೀಸರು ಅವರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Vishwa News 24

Recent Posts

ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಮಧ್ವರಾಜ್ ನೇಮಕ -vishwanews24

ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಮಧ್ವರಾಜ್ ನೇಮಕ ನವದೆಹಲಿ: ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪದಾಧಿಕಾರಿಗಳನ್ನು…

24 hours ago

ನ. 24, 25 ರಂದು ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜಾರ್ದೆ ಮಾರಿಪೂಜೆ ಸಂಭ್ರಮ – vishwanews24

ನ. 24, 25 ರಂದು ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜಾರ್ದೆ ಮಾರಿಪೂಜೆ ಸಂಭ್ರಮ ಇತಿಹಾಸ ಪ್ರಸಿದ್ಧ ಕಾಪು ಹಳೆ…

3 days ago

ಸಂಬಂಧಿಕರನ್ನು ಬೀಳ್ಕೊಡಲು ಬಂದ 12 ಮಂದಿ ವಂದೇ ಭಾರತ್‌ ರೈಲಲ್ಲಿ ಲಾಕ್‌ ; 36 ಸಾವಿರ ದಂಡ – vishwanews24

ಸಂಬಂಧಿಕರನ್ನು ಬೀಳ್ಕೊಡಲು ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರವೇಶಿಸಿದ 12 ಮಂದಿ ಸ್ವಯಂಚಾಲಿತ ಬಾಗಿಲುಗಳು ಮುಚ್ಚಿದ್ದರಿಂದ ರೈಲಿನೊಳಗೆ ಲಾಕ್ 140 ಕಿ.ಮೀ…

3 days ago

ಗ್ರಾಹಕರಿಗೆ ಗುಡ್ ನ್ಯೂಸ್: ಸೋನಾ ಮಸೂರಿ ಅಕ್ಕಿ ಬೆಲೆಯಲ್ಲಿ ಭಾರೀ ಇಳಿಕೆ, ಕೆಜಿಗೆ ₹ 20ರವರೆಗೆ ಕಡಿತ – vishwanews24

ಗ್ರಾಹಕರಿಗೆ ಗುಡ್ ನ್ಯೂಸ್: ಸೋನಾ ಮಸೂರಿ ಅಕ್ಕಿ ಬೆಲೆಯಲ್ಲಿ ಭಾರೀ ಇಳಿಕೆ, ಕೆಜಿಗೆ ₹20ರವರೆಗೆ ಕಡಿತ ಬೆಂಗಳೂರು: ಮಾರುಕಟ್ಟೆಯಲ್ಲಿ ಹೊಸ…

3 days ago

ನವೆಂಬರ್ 30ರವರೆಗೆ ಸೌದಿಗೆ ಇಂಡಿಗೋ ವಿಮಾನ ಹಾರಾಟ ರದ್ದು -vishwanews24

ನವೆಂಬರ್ 30ರವರೆಗೆ ಸೌದಿಗೆ ಇಂಡಿಗೋ ವಿಮಾನ ಹಾರಾಟ ರದ್ದು ನವದೆಹಲಿ: ಸೌದಿ ಅರೇಬಿಯಾದಲ್ಲಿನ ಪ್ರಸ್ತುತ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಇಂಡಿಗೋ…

3 days ago

ಶಬರಿಮಲೆಯಲ್ಲಿ ಕ್ಯೂ ನಿಲ್ಲುವ ಅಗತ್ಯವಿಲ್ಲ : ಇನ್ಮುಂದೆ ಸ್ವಯಂಚಾಲಿತ ಯಂತ್ರದ ಮೂಲಕ ಸಿಗಲಿದೆ ಅರವಣ, ಅಪ್ಪಂ ಪ್ರಸಾದ – vishwanews24

ಶಬರಿಮಲೆಯಲ್ಲಿ ಕ್ಯೂ ನಿಲ್ಲುವ ಅಗತ್ಯವಿಲ್ಲ : ಇನ್ಮುಂದೆ ಸ್ವಯಂಚಾಲಿತ ಯಂತ್ರದ ಮೂಲಕ ಸಿಗಲಿದೆ ಅರವಣ, ಅಪ್ಪಂ ಪ್ರಸಾದ ಶಬರಿಮಲೆ: ಅಯ್ಯಪ್ಪ…

3 days ago