Featured

ಸುಬ್ರಹ್ಮಣ್ಯ: ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ ಮೇಲೆ ಬಿದ್ದ ಬೃಹತ್ ಗಾತ್ರದ ಮರ ; ಪ್ರಯಾಣಿಕರು ಅಪಾಯದಿಂದ ಪಾರು – Vishwnaews24

ಸುಬ್ರಹ್ಮಣ್ಯ: ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ ಮೇಲೆ ಬಿದ್ದ ಬೃಹತ್ ಗಾತ್ರದ ಮರ ; ಪ್ರಯಾಣಿಕರು ಅಪಾಯದಿಂದ ಪಾರು

ಸುಬ್ರಹ್ಮಣ್ಯ: ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ ಮೇಲೆ ರಸ್ತೆ ಬದಿಯಲ್ಲಿದ್ದ ಬೃಹತ್ ಗಾತ್ರದ ಮರವೊಂದು ಮುರಿದು ಬಿದ್ದ ಘಟನೆ ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಅನಿಲ ಎಂಬಲ್ಲಿ ನಡೆದಿದೆ. ಇದೇ ಸಂದರ್ಭ ಮತ್ತೊಂದೆಡೆ ಟೆಂಪೋ ಟ್ರಾವೆಲರ್ ಮೇಲೆ ಮರ ಬಿದ್ದು, ವಾಹನ ಜಖಂಗೊಂಡು ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಅಲ್ಲೇ ಸಮೀಪ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಪೆರಿಯಶಾಂತಿ ಎಂಬಲ್ಲಿ ನಿನ್ನೆ ನಡೆದಿದೆ.

ಸುಬ್ರಮಣ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರ್ಕಾರಿ ಬಸ್ ಮೇಲೆ ಮರ ಬಿದ್ದಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಈ ಭಾಗದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಮತ್ತೊಂದು ಕಡೆ ಸುಬ್ರಮಣ್ಯದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಟೆಂಪೋ ಟ್ರಾವೆಲರ್ ಮೇಲೆ ಪೆರಿಯಶಾಂತಿ ಸಮೀಪ ರಸ್ತೆಯ ಪಕ್ಕದಲ್ಲಿದ್ದ ಮರವೊಂದು ಉರುಳಿ ಬಿದ್ದಿದೆ.

ಈ ಘಟನೆಯಲ್ಲಿ ಟ್ರಾವೆಲರ್ ಮೇಲ್ಭಾಗಕ್ಕೆ ಹಾನಿಯಾಗಿದ್ದು, ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಈ ಮಳೆಗೆ ರಸ್ತೆ ಬದಿಯಲ್ಲಿನ ಅಪಾಯಕಾರಿಯಾಗಿರುವ ಮರಗಳು ಉರುಳಿವೆ ಎಂದು ಹೇಳಲಾಗುತ್ತಿದೆ. ರಸ್ತೆ ಬದಿಯಲ್ಲಿರುವ ಅಪಾಯಕಾರಿ ಮರಗಳಿಂದ ಇಷ್ಟೆಲ್ಲಾ ದುಷ್ಪರಿಣಾಮ ಸಂಭವಿಸುತ್ತಿದ್ದರೂ ಕೂಡಾ ಅರಣ್ಯ ಇಲಾಖೆ ಮಾತ್ರ ಇದರ ಬಗ್ಗೆ ಗಮನವಹಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.

ಈ ಭಾಗದ ಹೆದ್ದಾರಿಗಳಲ್ಲಿ ಆಗಾಗ ರಸ್ತೆ ಬದಿಯ ಮರಗಳು ಬಿದ್ದು ಪ್ರಾಣಹಾನಿ ಸಹಿತ ಅಪಾಯಗಳು ಆಗುತ್ತಿದ್ದರೂ ಅರಣ್ಯ ಇಲಾಖೆ ಮಾತ್ರ ಇನ್ನೂ ಎಚ್ಚೆತ್ತುಕೊಳ್ಳುತ್ತಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

13 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

14 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

14 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

14 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

15 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

15 hours ago