ಸುಬ್ರಹ್ಮಣ್ಯ: ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮೇಲೆ ರಸ್ತೆ ಬದಿಯಲ್ಲಿದ್ದ ಬೃಹತ್ ಗಾತ್ರದ ಮರವೊಂದು ಮುರಿದು ಬಿದ್ದ ಘಟನೆ ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಅನಿಲ ಎಂಬಲ್ಲಿ ನಡೆದಿದೆ. ಇದೇ ಸಂದರ್ಭ ಮತ್ತೊಂದೆಡೆ ಟೆಂಪೋ ಟ್ರಾವೆಲರ್ ಮೇಲೆ ಮರ ಬಿದ್ದು, ವಾಹನ ಜಖಂಗೊಂಡು ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಅಲ್ಲೇ ಸಮೀಪ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಪೆರಿಯಶಾಂತಿ ಎಂಬಲ್ಲಿ ನಿನ್ನೆ ನಡೆದಿದೆ.
ಸುಬ್ರಮಣ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರ್ಕಾರಿ ಬಸ್ ಮೇಲೆ ಮರ ಬಿದ್ದಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಈ ಭಾಗದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಮತ್ತೊಂದು ಕಡೆ ಸುಬ್ರಮಣ್ಯದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಟೆಂಪೋ ಟ್ರಾವೆಲರ್ ಮೇಲೆ ಪೆರಿಯಶಾಂತಿ ಸಮೀಪ ರಸ್ತೆಯ ಪಕ್ಕದಲ್ಲಿದ್ದ ಮರವೊಂದು ಉರುಳಿ ಬಿದ್ದಿದೆ.
ಈ ಘಟನೆಯಲ್ಲಿ ಟ್ರಾವೆಲರ್ ಮೇಲ್ಭಾಗಕ್ಕೆ ಹಾನಿಯಾಗಿದ್ದು, ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಈ ಮಳೆಗೆ ರಸ್ತೆ ಬದಿಯಲ್ಲಿನ ಅಪಾಯಕಾರಿಯಾಗಿರುವ ಮರಗಳು ಉರುಳಿವೆ ಎಂದು ಹೇಳಲಾಗುತ್ತಿದೆ. ರಸ್ತೆ ಬದಿಯಲ್ಲಿರುವ ಅಪಾಯಕಾರಿ ಮರಗಳಿಂದ ಇಷ್ಟೆಲ್ಲಾ ದುಷ್ಪರಿಣಾಮ ಸಂಭವಿಸುತ್ತಿದ್ದರೂ ಕೂಡಾ ಅರಣ್ಯ ಇಲಾಖೆ ಮಾತ್ರ ಇದರ ಬಗ್ಗೆ ಗಮನವಹಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.
ಈ ಭಾಗದ ಹೆದ್ದಾರಿಗಳಲ್ಲಿ ಆಗಾಗ ರಸ್ತೆ ಬದಿಯ ಮರಗಳು ಬಿದ್ದು ಪ್ರಾಣಹಾನಿ ಸಹಿತ ಅಪಾಯಗಳು ಆಗುತ್ತಿದ್ದರೂ ಅರಣ್ಯ ಇಲಾಖೆ ಮಾತ್ರ ಇನ್ನೂ ಎಚ್ಚೆತ್ತುಕೊಳ್ಳುತ್ತಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…