Featured

ಸುಬ್ರಹ್ಮಣ್ಯ: ಡಿ. 10ರಿಂದ 24ರ ವರೆಗೆ ಕುಕ್ಕೆಯಲ್ಲಿ ಚಂಪಾಷಷ್ಠಿ ಮಹೋತ್ಸವ – vishwanews24

ಸುಬ್ರಹ್ಮಣ್ಯ: ಡಿ. 10ರಿಂದ 24ರ ವರೆಗೆ ಕುಕ್ಕೆಯಲ್ಲಿ ಚಂಪಾಷಷ್ಠಿ ಮಹೋತ್ಸವ

ಸುಬ್ರಹ್ಮಣ್ಯ: ಕಡಬ ತಾಲೂಕಿನ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ. 10ರಿಂದ 24ರ ವರೆಗೆ ಚಂಪಾಷಷ್ಠಿ ಮಹೋತ್ಸವ, ವಾರ್ಷಿಕ ಉತ್ಸವಾದಿಗಳು ಜರಗಲಿವೆ.

ಡಿ. 9ರಂದು ಮೂಲ ಮೃತ್ತಿಕಾ ಪ್ರಸಾದ ವಿತರಣೆ ಜರಗಲಿದೆ. ಡಿ. 10ರಿಂದ 12ರ ವರೆಗೆ ಭಕ್ತರು ಕ್ಷೇತ್ರಕ್ಕೆ ಹಸುರು ಕಾಣಿಕೆ ಸಮರ್ಪಿಸಬಹುದು.

ಡಿ. 10ರಂದು ಕೊಪ್ಪರಿಗೆ ಏರುವ ಮೂಲಕ ಚಂಪಾಷಷ್ಠಿ ಮಹೋತ್ಸವ ಆರಂಭಗೊಳ್ಳಲಿದೆ. ಡಿ. 16ರಂದು ರಾತ್ರಿ ಹೂವಿನ ತೇರಿನ ಉತ್ಸವ, ಡಿ. 17ರಂದು ರಾತ್ರಿ ಪಂಚಮಿ ರಥೋತ್ಸವ, ತೈಲಾಭ್ಯಂಜನ, ಡಿ. 18ರಂದು ಪ್ರಾತಃಕಾಲ ಚಂಪಾಷಷ್ಠಿ ಮಹಾರಥೋತ್ಸವ, ಡಿ. 19ರಂದು ಅವಭೃಥ ಉತ್ಸವ, ನೌಕಾವಿಹಾರ, ಡಿ. 24ರಂದು ಕೊಪ್ಪರಿಗೆ ಇಳಿಯುವುದು, ರಾತ್ರಿ ನೀರುಬಂಡಿ ಉತ್ಸವ, ದೈವಗಳ ನಡಾವಳಿ ಜರಗಲಿದೆ. 2024ರ ಜ. 16ರಂದು ಕಿರುಷಷ್ಠಿ ಮಹೋತ್ಸವ ಜರಗಲಿದೆ.

ಭಕ್ತರಿಗೆ ಸೂಚನೆ

ಡಿ. 9ರಂದು ಮೂಲಮೃತ್ತಿಕಾ ಪ್ರಸಾದ ತೆಗೆ ಯುವ ಕಾರ್ಯಕ್ರಮ ಇರುವುದರಿಂದ ಭಕ್ತರಿಗೆ ಬೆಳಗ್ಗಿನಿಂದ ಅಪರಾಹ್ನ ಗಂಟೆ 2ರ ವರೆಗೆ ಶ್ರೀ ದೇವರ ದರ್ಶನ ಹಾಗೂ ಸೇವೆ ನೆರವೇರಿಸಲು ಅವಕಾಶ ಇಲ್ಲ ಎಂದು ಪ್ರಕಟನೆ ತಿಳಿಸಿದೆ.

ಡಿ. 8ರಿಂದ ಸರ್ಪಸಂಸ್ಕಾರ ಸೇವೆ ಇಲ್ಲ

ಚಂಪಾಷಷ್ಠಿ ಮಹೋತ್ಸವ ನಿಮಿತ್ತ ಡಿ. 8ರಿಂದ 24ರ ವರೆಗೆ ಸರ್ಪ ಸಂಸ್ಕಾರ ಸೇವೆ, ಡಿ. 10ರಿಂದ 24ರ ವರೆಗೆ ಸಾಯಂಕಾಲದ ಆಶ್ಲೇಷಾ ಬಲಿ ಸೇವೆ ನೆರವೇರುವುದಿಲ್ಲ. ಡಿ. 12ರ ಲಕ್ಷದೀಪೋತ್ಸವ, ಡಿ. 16ರ ಚೌತಿ, ಡಿ. 17ರ ಪಂಚಮಿ ದಿನಗಳಲ್ಲಿ ಭಕ್ತರ ಪ್ರಾರ್ಥನೆ ಸೇವೆ ರಾತ್ರಿ ಹೊತ್ತಿನಲ್ಲಿ ಇರುವುದಿಲ್ಲ. ಡಿ. 18ರ ಚಂಪಾಷಷ್ಠಿಯಂದು ಮಧ್ಯಾಹ್ನ ಪ್ರಾರ್ಥನೆ, ಡಿ. 18ರಂದು ಚಂಪಾಷಷ್ಠಿ ದಿನ ಆಶ್ಲೇಷಾ ಬಲಿ ಮತ್ತು ನಾಗಪ್ರತಿಷ್ಠೆ ಸೇವೆಗಳು ಇರುವುದಿಲ್ಲ. ಡಿ. 12ರ ಲಕ್ಷದೀಪೋತ್ಸವ), ಡಿ. 16ರಂದು (ಚೌತಿ), ಡಿ. 17ರಂದು (ಪಂಚಮಿ), ಡಿ. 18ರಂದು (ಚಂಪಾಷಷ್ಠಿ) ಮತ್ತು ಡಿ. 27ರಂದು ಪಂಚಾಮೃತ ಮಹಾಭಿಷೇಕ ಸೇವೆ ನೆರವೇರುವುದಿಲ್ಲ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

16 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

16 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

17 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

17 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

17 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

17 hours ago