ಸುಬ್ರಹ್ಮಣ್ಯ,: ಇತ್ತೀಚೆಗೆ ನಾಪತ್ತೆಯಾದ ಸುಬ್ರಹ್ಮಣ್ಯ ಗ್ರಾ.ಪಂ. ಸದಸ್ಯೆ ಭಾರತಿ ಮೂಕಮಲೆ (33) ವಿಡಿಯೋ ಒಂದು ವೈರಲ್ ಆಗುತ್ತಿದ್ದು, ನನ್ನನ್ನು ಯಾರು ಅಪಹರಿಸಿಲ್ಲ, ನಾನು ಪ್ರೀತಿಸಿದವರೊಂದಿಗೆ ಬಂದಿದ್ದೇನೆ ಎಂದು ಹೇಳಿಕೊಂಡಿದ್ದಾರೆ.
ಐನೆಕಿದು ಗ್ರಾಮದ ಮೂಕಮಲೆ ಮನೆ ನಿವಾಸಿ ಶಶಿಕಾಂತ್ ಎಂಬವರ ಪತ್ನಿ ಭಾರತಿ ಮೂಕಮಲೆ (33) ಅವರು ಅ. 29ರಂದು ನಾಪತ್ತೆಯಾಗಿದ್ದು. ಶಶಿಕಾಂತ್ ಅವರು ಅ. 29ರ ಮಧ್ಯಾಹ್ನ ತನಕ ಕೆಲಸಕ್ಕೆ ಹೋಗಿ ಬಳಿಕ ಮನೆಗೆ ಹೋಗಿ ತಾಯಿ ಹಾಗೂ ಅತ್ತೆಗೆ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಕೊಡಿಸಿ ವಾಪಸ್ ರಾತ್ರಿ ಮನೆಗೆ ಬಂದ ವೇಳೆ ಪತ್ನಿ ಮನೆಯಲ್ಲಿ ಇರಲಿಲ್ಲ. ಆ ಬಳಿಕ ಮಕ್ಕಳಲ್ಲಿ ವಿಚಾರಿಸಿದಾಗ ಅವರು ಎಲ್ಲಿಯೋ ಹೋಗಿ ಬರುವುದಾಗಿ ತಿಳಿಸಿ ಹೋಗಿರುತ್ತಾಳೆ ಎಂದು ತಿಳಿಸಿದ್ದು, ಬಳಿಕ ಪತ್ನಿಗೆ ಕರೆ ಮಾಡಿದಾಗ ಫೋನ್ ಸ್ವೀಚ್ ಆಫ್ ಆಗಿತ್ತು. ಈ ಬಗ್ಗೆ ಸಂಬಂಧಿಕರಲ್ಲಿ, ನೆರೆಕರೆಯವರಲ್ಲಿ ವಿಚಾರಿಸಿದಾಗ ಎಲ್ಲಿಯೂ ಸಿಗಲಿಲ್ಲ ಎಂದು ಪತಿ ಶಶಿಕಾಂತ್ ಅವರು ಸುಬ್ರಹ್ಮಣ್ಯ ಠಾಣೆಯಲ್ಲಿ ನೀಡಿದ ದೂರಿನಲ್ಲಿ ತಿಳಿಸಲಾಗಿತ್ತು.
ಭಾರತಿ ನಾಪತ್ತೆಯಾಗಿ ದಿನ 20 ಕಳೆದರೂ ಪತ್ತೆಯಾಗದ ಹಿನ್ನಲೆ ಸುಬ್ರಹ್ಮಣ್ಯ ಅಧ್ಯಕ್ಷ ಸದಸ್ಯರ ತಂಡ ಪೊಲೀಸ್ ಠಾಣೆಗೆ ಬೇಟಿ ಇತ್ತು ಶೀಘ್ರ ಪತ್ತೆಗೆ ಮನವಿ ಸಲ್ಲಿಸಿತ್ತು.
ಇದೀಗ ಭಾರತಿ ಅವರ ವಿಡಿಯೋ ವೈರಲ್ ಆಗಿದ್ದು, ಅದರಲ್ಲಿ ” ನಾನು ನಾನಾಗಿಯೇ ಬಂದಿದ್ದೇನೆ. ನನ್ನನ್ನು ಯಾರೂ ಅಪಹರಿಸಿಲ್ಲ. ನಾನು ಅವರನ್ನು ಮನೆಯ ಹತ್ತಿರ ಬರಲು ಹೇಳಿದ್ದೆ. ಅವರು ಬಂದು ನನ್ನನ್ನು ಕರೆದುಕೊಂಡು ಹೋದರು. 5 ವರ್ಷದಿಂದ ನಾನು ಲವ್ ಮಾಡ್ತಾ ಇದ್ದೆ. ಈಗಲೂ ಮಾಡ್ತಾ ಇದ್ದೇನೆ. ಮದುವೆಗೆ ಮುಂಚೆನೂ ಲವ್ ಮಾಡ್ತಿದ್ದೆ. ಇದರಿಂದಾಗಿ ಯಾರಿಗೂ ತೊಂದರೆ ಕೊಡಬೇಡಿ. ಯಾರತ್ರ ಕೇಳುವುದೂ ಬೇಡ. ನಮಗೆ ತೊಂದರೆ ಕೊಡಬೇಡಿ. ಹಾಗೇನಾದ್ರೂ ಮಾಡಿದ್ರೆ ನಾವಿಬ್ಬರೂ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ. ನನ್ನನ್ನು ಯಾರೂ ಕಿಡ್ನಾಪ್ ಮಾಡಿಲ್ಲ. ನಾನು ಖುಷಿಯಾಗಿಯೇ ಇದ್ದೇನೆ. ಆಮೇಲೆ ಏನಾದ್ರೂ ಆದರೆ ನೀವೇ ಜವಾಬ್ದಾರರು ಎಂದು ಅವರು ವೀಡಿಯೋದಲ್ಲಿ ಹೇಳಿಕೊಂಡಿದ್ದಾರೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…