Featured

ಸುಭದ್ರ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಕೇಂದ್ರ ಬಿಜೆಪಿ ಸರ್ಕಾರದಿಂದ ಷಡ್ಯಂತ್ರ : ಸಿಎಂ ವಾಗ್ದಾಳಿ – vishwanews24

ಸುಭದ್ರ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಕೇಂದ್ರ ಬಿಜೆಪಿ ಸರ್ಕಾರದಿಂದ ಷಡ್ಯಂತ್ರ : ಸಿಎಂ ವಾಗ್ದಾಳಿ

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣದಲ್ಲಿ ರಾಜಕೀಯ ದುರುದ್ದೇಶದ ಸ್ವಯಂ ಪ್ರೇರಣೆಯಿಂದ ತನಿಖೆ ಕೈಗೆತ್ತಿಕೊಂಡಿರುವ ಜಾರಿ ನಿರ್ದೇಶನಾಲಯವು, ಪ್ರಕರಣದಲ್ಲಿ ಮಾಜಿ ಸಚಿವರಾದ ನಾಗೇಂದ್ರ ಅವರ ಹೆಸರನ್ನು ಹೇಳುವಂತೆ ನಿಗಮದ ಅಧಿಕಾರಿಗಳಿಗೆ ಇನ್ನಿಲ್ಲದ ಕಿರುಕುಳ ನೀಡುತ್ತಿರುವುದು ಅತ್ಯಂತ ಖಂಡನೀಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲಿಗೆ ಸರ್ಕಾರದ ವಿರುದ್ದ ಸುಳ್ಳು ಆರೋಪಗಳನ್ನು ಸೃಷ್ಟಿಸುವುದು, ನಂತರ ತಮ್ಮ ಜೀತದಾಳುಗಳಂತಿರುವ ಸಿಬಿಐ, ಇಡಿ ಮೊದಲಾದ ತನಿಖಾ ಸಂಸ್ಥೆಗಳಿಂದ ತನಿಖೆ ಮಾಡಿಸಿ ನಿರಪರಾಧಿಗಳನ್ನು ಅಪರಾಧಿಗಳೆಂದು ಬಿಂಬಿಸಿ ಜನರಲ್ಲಿ ಕೆಟ್ಟ ಅಭಿಪ್ರಾಯ ಮೂಡಿಸುವುದು, ಈ‌ ಮೂಲಕ ಸುಭದ್ರ ಸರ್ಕಾರವನ್ನು ಅಸ್ಥಿರಗೊಳಿಸುವುದು ಕೇಂದ್ರದ ಬಿಜೆಪಿ ಸರ್ಕಾರ ದೇಶದ ವಿವಿಧ ರಾಜ್ಯಗಳಲ್ಲಿ ಮಾಡಿರುವ ಷಡ್ಯಂತ್ರ. ಅದನ್ನೇ ಇಲ್ಲಿಯೂ ಮಾಡಲು ಹೊರಟಿದೆ ಎಂದು ಕಿಡಿಕಾರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವರಾದ ಅಮಿತ್‌ ಶಾ ಅವರೇ, ನೀವು ಇಡಿ, ಐಟಿ, ಸಿಬಿಐ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ನಡೆಸುತ್ತಿರುವ ಸೇಡಿನ ರಾಜಕಾರಣವನ್ನು ನಮ್ಮ ಜನ ಗಮನಿಸುತ್ತಿದ್ದಾರೆ.

ಈ ದುಷ್ಕೃತ್ಯಗಳ ಸರಣಿ‌ ಮುಂದುವರಿದರೆ ಜನತೆಯೇ ನಿಮ್ಮ ವಿರುದ್ಧ ಬಂಡೆದ್ದು ಪಾಠ ಕಲಿಸಲು ಸಿದ್ಧರಾಗಬಹುದು. ಬೇರೆ ರಾಜ್ಯಗಳಲ್ಲಿ ಆಡಿದ ಈ ಕಳ್ಳಾಟವನ್ನು ಕರ್ನಾಟಕದಲ್ಲಿ ಆಡಲು ಮುಂದಾಗಬೇಡಿ.
ಕನ್ನಡಿಗರು ಸಹನೆ, ಸೌಹಾರ್ದತೆಗೆ ಹೆಸರಾದವರಷ್ಟೆ ಅಲ್ಲ, ಅನ್ಯಾಯ, ಮೋಸವನ್ನು ಸಹಿಸದವರು, ಸತ್ಯ ಮತ್ತು ನ್ಯಾಯದ ಪರವಾಗಿ ಹೋರಾಡಬಲ್ಲ ಛಾತಿ ಉಳ್ಳವರು ಕೂಡಾ ಆಗಿದ್ದಾರೆ ಎನ್ನುವುದು ನೆನಪಿರಲಿ ಎಂದು ಹೇಳಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago