ಬೆಂಗಳೂರು: ಆರ್ಥಿಕ ಮುಗ್ಗಟ್ಟು ಕುರಿತು ಸರ್ಕಾರಕ್ಕೆ ಇಂಧನ ಇಲಾಖೆ ಬರೆದ ಪತ್ರ ಉಲ್ಲೇಖಿಸಿ ಇಂದು ರಾಜ್ಯ ಬಿಜೆಪಿ ಘಟಕ ತನ್ನ ‘ಎಕ್ಸ್’ ಖಾತೆಯಲ್ಲಿ ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿದೆ. ‘ಕರ್ನಾಟಕವನ್ನು ಎಲ್ಲಾ ವಲಯಗಳಲ್ಲೂ ಬರ್ಬಾದ್ ಮಾಡುವುದೇ ಕಾಂಗ್ರೆಸ್ ಸರ್ಕಾರದ ಅಸಲಿ ಕರ್ನಾಟಕ ಮಾಡೆಲ್, ಈಗಾಗಲೇ ಸುಭಿಕ್ಷವಾಗಿದ್ದ ಕರ್ನಾಟಕವನ್ನು ಒಂದು ವರ್ಷದಲ್ಲಿ ಹಾಳು ಮಾಡಿದ್ದು, ಇದರ ಸಂಪೂರ್ಣ ಶ್ರೇಯ ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆ ಎಂದು ವಾಗ್ದಾಳಿ ನಡೆಸಿದೆ.
ಜೊತೆಗೆ ‘ದೈನಂದಿನ ಖರ್ಚಿಗೂ ಹಣವಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿ, ಹೆಚ್ಚಿನ ಸಾಲ ಪಡೆಯಲು ಅನುಮತಿ ನೀಡಿ, ಇಲ್ಲವೇ ಸರ್ಕಾರದಿಂದ ಬರಬೇಕಿರುವ ಬಾಕಿ ಪಾವತಿಸಿ ಎಂದು ಪತ್ರ ಬರೆದಿರುವುದು, ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಎಷ್ಟರ ಮಟ್ಟಿಗೆ ಹದಗೆಡಿಸಿದೆ ಎಂಬುದರ ಸ್ಪಷ್ಟ ನಿದರ್ಶನವಾಗಿದೆ. ಸಿಎಂ ಸಿದ್ದರಾಮಯ್ಯ ಅವರೇ, ಕರ್ನಾಟಕ ಬರ್ಬಾದ್ ಆಗಿದೆ ಎಂಬುದು ನಿಮ್ಮ ಇಂಧನ ಇಲಾಖೆ ಬರೆದ ಪತ್ರದಿಂದಲೇ ಕೊನೆಗೂ ಋಜುವಾತಾಗಿದೆ. ಸಿದ್ದರಾಮಯ್ಯ, ಕರ್ನಾಟಕ ಕಂಡ ಅತ್ಯಂತ ದುರ್ಬಲ ಸಿಎಂ ಎನ್ನುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿಯ ಅಗತ್ಯವಿದೆಯೇ ಎಂದು ಬಿಜೆಪಿ ಘಟಕ ಕಿಡಿಕಾರಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…