ಸುರತ್ಕಲ್: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುಕ್ಕದಲ್ಲಿರುವ ಸುರತ್ಕಲ್ ಟೋಲ್ ಗೇಟ್‌ನ ಪರವಾನಗಿ ಅವಧಿ ನವೆಂಬರ್ 15ರಂದು ಅಂತ್ಯಗೊಳ್ಳಲಿದ್ದು, ಆ ಬಳಿಕ ಟೋಲ್ ಕೇಂದ್ರವನ್ನು ಮುಚ್ಚುವಂತೆ ಸುರತ್ಕಲ್ ಟೋಲ್ ವಿರೋಧಿ ಹೋರಾಟ ಸಮಿತಿ ನಿಯೋಗ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (ಎನ್‌ಎಚ್‌ಎಐ) ಮನವಿ ಸಲ್ಲಿಸಿದೆ.
ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಹಾಗೂ ಮಾಜಿ ಶಾಸಕ ವಿಜಯಕುಮಾರ್ ಶೆಟ್ಟಿ ನೇತೃತ್ವದಲ್ಲಿ ಎನ್‌ಎಚ್‌ಎಐ ಮಂಗಳೂರು ಯೋಜನಾ ನಿರ್ದೇಶಕ ಶಿಸು ಮೋಹನ್ ಅವರನ್ನು ಭೇಟಿಮಾಡಿದ ನಿಯೋಗ, ಟೋಲ್ ಗೇಟ್ ಪರವಾನಗಿ ನವೀಕರಿಸದಂತೆ ಆಗ್ರಹಿಸಿ ಮನವಿ ಸಲ್ಲಿಸಿದರು.
ಹೆದ್ದಾರಿ ಗುಂಡಿಗಳಿಂದ ಅಪಾಯಕಾರಿ ಸ್ಥಿತಿಗೆ ತಲುಪಿರುವ ಸುರತ್ಕಲ್, ನಂತೂರು ಹೆದ್ದಾರಿಯನ್ನು ತಕ್ಷಣ ದುರಸ್ತಿಗೊಳಿಸಬೇಕು, ದುರ್ಬಲಗೊಂಡು ಸಂಚಾರಕ್ಕೆ ಅಯೋಗ್ಯಗೊಂಡಿರುವ ಕೂಳೂರು ಸೇತುವೆಗೆ ಪರ್ಯಾಯವಾಗಿ ಹೊಸ ಸೇತುವೆಯನ್ನು ನಿರ್ಮಿಸಬೇಕು ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಆಗ್ರಹಿಸಿದೆ.
ತಾತ್ಕಾಲಿಕ ನೆಲೆಯಲ್ಲಿ ಪ್ರಾರಂಭವಾದ ಸುರತ್ಕಲ್ ಟೋಲ್ ಗೇಟ್ ಐದು ವರ್ಷದಿಂದ ಕಾರ್ಯಾಚರಿಸುತ್ತಿದೆ. ಸ್ಥಳೀಯರ ವಿರೋಧ, ಪ್ರತಿಭಟನೆಗಳ ನಡುವೆಯೂ ಮುಂದುವರಿಸಲಾಗಿದೆ. ಎರಡು ವರ್ಷಗಳಿಂದ ಕಡಿಮೆ ಅವಧಿಗೆ ಪದೇ ಪದೇ ಗುತ್ತಿಗೆ ನವೀಕರಣ ಮಾಡಲಾಗುತ್ತಿದೆ. ಈ ಹಿಂದಿನ ನಿರ್ಧಾರದಂತೆ ಸುರತ್ಕಲ್ ಟೋಲ್ ಕೇಂದ್ರವನ್ನು ಹೆಜಮಾಡಿ ಟೋಲ್ ಕೇಂದ್ರದ ಜೊತೆ ವಿಲೀನ ಮಾಡಬೇಕು ಎಂದು ಆಗ್ರಹಿಸಲಾಗಿದೆ.
ಬೇಡಿಕೆಯಂತೆ ಟೋಲ್ ಕೇಂದ್ರ ರದ್ದು ಮಾಡಬೇಕು. ಹೆದ್ದಾರಿಯ ದುರಸ್ತಿ ಮಾಡಬೇಕು. ತಪ್ಪಿದಲ್ಲಿ ಪ್ರಾಧಿಕಾರದ ವಿರುದ್ಧ ತೀವ್ರವಾದ ಹೋರಾಟ ಆರಂಭಿಸಲಾಗುವುದು ಎಂದು ಸಮಿತಿ ಎಚ್ಚರಿಕೆ ನೀಡಿದೆ.
ನಿಯೋಗದಲ್ಲಿ ಮುನೀರ್ ಕಾಟಿಪಳ್ಳ, ಭರತ್ ಶೆಟ್ಟಿ ಕುಳಾಯಿ ( ಅಧ್ನಕ್ಷರು, ನಾಗರಿಕ ಸಮಿತಿ ಕುಳಾಯಿ) ಗಂಗಾಧರ ಭಂಜನ್ (ಕಾರ್ಯದರ್ಶಿ, ನಾಗರಿಕ ಸಮಿತಿ ಕುಳಾಯಿ) ಡಿವೈಎಫ್ಐ ಮುಖಂಡರಾದ ಸಂತೋಷ್ ಬಜಾಲ್ ಹೋರಾಟ ಸಮಿತಿ ಪ್ರಮುಖರಾದ ಶ್ರೀಮಾಥ್ ಕುಲಾಲ್, ನಿತಿನ್ ಬಂಗೇರ, ಅಜ್ಮಾಲ್ ಅಹ್ಮದ್, ಜನಾರ್ಧನ ಸಾಲ್ಯಾನ್ ಕುಳಾಯಿ ಹಾಜರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…