ಸುರತ್ಕಲ್: ಡೆತ್ ನೋಟ್ ಬರೆದಿಟ್ಟು 26ರ ಯುವಕ ಆತ್ಮಹತ್ಯೆ – Vishwanews24
ಸುರತ್ಕಲ್: ಡೆತ್ ನೋಟ್ ಬರೆದಿಟ್ಟು 26ರ ಯುವಕ ಆತ್ಮಹತ್ಯೆ – Vishwanews24
ಮಂಗಳೂರು: ಯುವಕನೋರ್ವ ತನ್ನ ಕಚೇರಿಯಲ್ಲಿ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುರತ್ಕಲ್ ಸಮೀಪದ ಕುಳಾಯಿಯಲ್ಲಿ ಸೋಮವಾರ ನಡೆದಿದೆ.
ಕಿನ್ನಿಗೋಳಿ ಪಕ್ಷಿಕೆರೆ ನಿವಾಸಿ ದಿ. ದಿನೇಶ್ ಎಂಬವರ ಪುತ್ರ ಸುಶಾಂತ್ (26) ಎಂದು ಗುರುತಿಸಲಾಗಿದೆ.
ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಳಾಯಿಯಲ್ಲಿರುವ ಸನ್ರೈಸ್ ಕಾರ್ಪೊರೇಷನ್ ಕಚೇರಿಯಲ್ಲಿ ಸುಶಾಂತ್ ಕೆಲಸ ಮಾಡುತ್ತಿದ್ದು, ಅಲ್ಲಿ ಶಾಲನ್ನು ಕುತ್ತಿಗೆಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಶಾಂತ್ ಹೆತ್ತವರು 15 ವರ್ಷಗಳ ಹಿಂದೆ ಮೃತಪಟ್ಟಿದ್ದು, ಅವರು ಹಿರಿಯ ಸಹೋದರ ಅಶ್ವಿತ್ ಅವರನ್ನು ಅಗಲಿದ್ದಾರೆ.
ಹಣಕಾಸಿನ ಮುಗ್ಗಟ್ಟು ಎದುರಿಸುತ್ತಿದ್ದು, ಸಾಲದಿಂದ ಈ ಕೃತ್ಯ ಎಸಗುತ್ತಿರುವುದಾಗಿ ಸುಶಾಂತ್ ಬರೆದಿದ್ದೆನ್ನಲಾದ ಡೆತ್ ನೋಟ್ ನಲ್ಲಿ ಉಲ್ಲೇಖಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ತನಿಖೆ ಮುಂದುವರಿಸಿದ್ದಾರೆ.
