Featured

ಸುರತ್ಕಲ್‌: ಡೆತ್‌ ನೋಟ್‌ ಬರೆದಿಟ್ಟು 26ರ ಯುವಕ ಆತ್ಮಹತ್ಯೆ – Vishwanews24

ಸುರತ್ಕಲ್‌: ಡೆತ್‌ ನೋಟ್‌ ಬರೆದಿಟ್ಟು 26ರ ಯುವಕ ಆತ್ಮಹತ್ಯೆ – Vishwanews24

ಮಂಗಳೂರು: ಯುವಕನೋರ್ವ ತನ್ನ ಕಚೇರಿಯಲ್ಲಿ ಡೆತ್‌ ನೋಟ್‌ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುರತ್ಕಲ್‌ ಸಮೀಪದ ಕುಳಾಯಿಯಲ್ಲಿ ಸೋಮವಾರ ನಡೆದಿದೆ.

ಕಿನ್ನಿಗೋಳಿ ಪಕ್ಷಿಕೆರೆ ನಿವಾಸಿ ದಿ. ದಿನೇಶ್ ಎಂಬವರ ಪುತ್ರ ‌ಸುಶಾಂತ್ (26) ಎಂದು ಗುರುತಿಸಲಾಗಿದೆ.

ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಳಾಯಿಯಲ್ಲಿರುವ ಸನ್‌ರೈಸ್ ಕಾರ್ಪೊರೇಷನ್ ಕಚೇರಿಯಲ್ಲಿ ಸುಶಾಂತ್ ಕೆಲಸ ಮಾಡುತ್ತಿದ್ದು, ಅಲ್ಲಿ ಶಾಲನ್ನು‌ ಕುತ್ತಿಗೆಗೆ ಬಿಗಿದು ಆತ್ಮಹತ್ಯೆ ‌ಮಾಡಿಕೊಂಡಿದ್ದಾರೆ. ಸುಶಾಂತ್ ಹೆತ್ತವರು 15 ವರ್ಷಗಳ ಹಿಂದೆ ಮೃತಪಟ್ಟಿದ್ದು, ಅವರು ಹಿರಿಯ ಸಹೋದರ ಅಶ್ವಿತ್ ಅವರನ್ನು ಅಗಲಿದ್ದಾರೆ.

ಹಣಕಾಸಿನ ಮುಗ್ಗಟ್ಟು ಎದುರಿಸುತ್ತಿದ್ದು, ಸಾಲದಿಂದ ಈ ಕೃತ್ಯ ಎಸಗುತ್ತಿರುವುದಾಗಿ ಸುಶಾಂತ್ ಬರೆದಿದ್ದೆನ್ನಲಾದ ಡೆತ್ ನೋಟ್ ನಲ್ಲಿ ಉಲ್ಲೇಖಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ತನಿಖೆ ಮುಂದುವರಿಸಿದ್ದಾರೆ.

Vishwa News 24

Recent Posts

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

1 hour ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

2 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

2 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

2 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

2 hours ago

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago