ಸುರತ್ಕಲ್‌ ಬೀಚ್‌ : ನೀರಿನಲ್ಲಿ ಆಟವಾಡುತ್ತಿದ್ದಾಗ ಮುಳುಗಿ ಓರ್ವ ವಿದ್ಯಾರ್ಥಿನಿ ಮೃತ್ಯು, ಇಬ್ಬರ ರಕ್ಷಣೆ -Vishwanews24

ಸುರತ್ಕಲ್‌ : ಸುರತ್ಕಲ್‌ ಎನ್‌ಐಟಿಕೆ ಬಳೀ ಬೀಚ್‌ನಲ್ಲಿ ಆಟವಾಡಲು ತೆರಳಿದ್ದ 23 ವಿದ್ಯಾರ್ಥಿನಿಯರ ಪೈಕಿ ಒಬ್ಬಳೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು ಇನ್ನಿಬ್ಬರನ್ನು ಸ್ಥಳಿಯರು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಮೃತಪಟ್ಟ ವಿದ್ಯಾರ್ಥಿನಿಯನ್ನು ಮಧ್ಯಪ್ರದೇಶದ ಸಾಗರ್‌ ನಿವಾಸಿ ವಾರಂಗಲ್‌ ಎನ್‌ಐಟಿಕೆ ವಿದ್ಯಾರ್ಥಿನಿ ನಿರ್ಮಲಾ ದಂಗವಾಲ್‌ ಎಂದು ಗುರುತಿಸಲಾಗಿದೆ.

ಎನ್‌ಐಟಿ ವಾರಂಗಲ್‌ನ ೨೩ ವಿದ್ಯಾರ್ಥಿಗಳು ಸುರತ್ಕಲ್‌ ಎನ್‌ಐಟಿಕೆಯಲ್ಲಿ ನಡೆದಿದ್ದ ಆಲ್‌ ಇಂಡಿಯಾ ಅಂತರ್‌ ಎನ್‌ಐಟಿ ಕ್ರೀಡಕೂಟದಲ್ಲಿ ಭಾಗವಹಿಸಿದ್ದು ಈ ಕ್ರೀಡಾಕೂಟ ಮುಗಿದ ಬಳಿಕ ದೈಹಿಕ ಶಿಕ್ಷಕ ರಾಜು ಒಡೆಲಾ ಅವರೊಂದಿಗೆ ಎನ್‌ಐಟಿಕೆ ಬೀಚ್‌ಗೆ ತೆರಳಿದ್ದರು.

ನೀರಿನಲ್ಲಿ ಆಟವಾಡುತ್ತಿದ್ದ ವಿದ್ಯಾರ್ಥಿನಿಯರ ಪೈಕಿ ನಿರ್ಮಲಾ, ಮೇಘನಾ ಹಾಗೂ ಕನೋಜ್‌ ಎಂಬವರು ಸಮುದ್ರದ ಅಲೆಗಳ ರಭಸಕ್ಕೆ ಸಿಲುಕಿ ಮುಳುಗುತ್ತಿದ್ದು ಇತರೆ ವಿದ್ಯಾರ್ಥಿಗಳು ಸಹಾಯಕ್ಕೆಂದು ಕೂಗಿಕೊಂಡಿದ್ದಾರೆ. ಸ್ಥಳೀಯ ರಕ್ಷಣಾ ಕಾರ್ಯಕರ್ತರು ಮೂವರು ವಿದ್ಯಾರ್ಥಿಗಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಿದ್ದು ಆ ಪೈಕಿ ನಿರ್ಮಲಾ ದಂಗವಾಲ್‌ ಅವರು ಮೃತಪಟ್ಟಿರುವುದಾಗಿ ವೈದ್ಯರು ಖಚಿತ ಪಡಿಸಿದ್ದಾರೆ.

ಈ ಬಗ್ಗೆ ಕ್ರೀಡಾ ಕೂಟದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಒಬ್ಬರು ಪ್ರಾಧ್ಯಪಕರು ಈ ಬೀಚ್‌ ಹೆಸರುವಾಸಿಯಾಗಿದ್ದು ಅಲ್ಲಿ ವಿಹರಿಸಿ ಆಟವಾಡಿ. ಆದರೆ ಅತೀ ಎಚ್ಚರವಾಗಿರಿ. ಇಲ್ಲಿನ ಸಮುದ್ರ ಬಹಳ ಅಪಾಯಾಕಾರಿ ಎಂದು ಎಚ್ಚರಿಕೆ ನೀಡಿದ್ದರು.

ಈ ಬಗ್ಗೆ ಸುರತ್ಕಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago